ADVERTISEMENT

ನೇಕಾರರಿಂದ ಸೀರೆ ಖರೀದಿ: ಸಿಎಂ ಬಳಿಗೆ ನಿಯೋಗ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 13:12 IST
Last Updated 5 ಜೂನ್ 2020, 13:12 IST

ಬೆಳಗಾವಿ: ಕೋವಿಡ್–19 ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ನೇಕಾರರಿಗೆ ನೆರವಾಗುವ ನಿಟ್ಟಿನಲ್ಲಿ ಅವರಿಂದ ವಿವಿಧ ಇಲಾಖೆಗಳ ಮೂಲಕ ಸೀರೆಗಳನ್ನು ಖರೀದಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲು ಜನಪ್ರತಿನಿಧಿಗಳ ನಿಯೋಗ ತೆರಳಲು ನಿರ್ಧರಿಸಲಾಯಿತು.

ಇಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ‘ನೇಕಾರರಿಂದ ಸೀರೆ ಖರೀದಿಸಿ ಕೊರೊನಾ ಯೋಧರಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಬೇಕು. ಅದರಿಂದ ನೇಕಾರರಿಗೂ ಅನುಕೂಲವಾಗುತ್ತದೆ. ಕೊರೊನಾ ಭೀತಿಯಲ್ಲೂ ಕೆಲಸ ಮಾಡಿದವರನ್ನೂ ವಿಶೇಷವಾಗಿ ಗೌರವಿಸಿದಂತೆಯೂ ಆಗುತ್ತದೆ’ ಎಂದು ತಿಳಿಸಿದರು.

ನೇಕಾರರ ಬಳಿ ಕೆಲಸ ಮಾಡುವವರಿಗೂ ಸರ್ಕಾರದಿಂದ ಆರ್ಥಿಕ ಪರಿಹಾರ ನೀಡಬೇಕು ಎಂಬ ಒತ್ತಾಯ ವ್ಯಕ್ತವಾಯಿತು.

ADVERTISEMENT

‘ಇವೆಲ್ಲ ವಿಷಯಗಳ ಕುರಿತು ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಿ ಚರ್ಚಿಸೋಣ’ ಎಂದು ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.