ADVERTISEMENT

ಚಿಕ್ಕೋಡಿ: ಗಡಿ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಉಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 14:14 IST
Last Updated 21 ಫೆಬ್ರುವರಿ 2025, 14:14 IST
ಚಿಕ್ಕೋಡಿ ಪಟ್ಟಣದ ಮಿನಿ ವಿಧಾನಸೌಧದ ಕಚೇರಿ ಎದುರು ಕಿತ್ತೂರ ಕರ್ನಾಟಕ ಸೇನೆ ವತಿಯಿಂದ ಗಡಿ ಭಾಗದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು
ಚಿಕ್ಕೋಡಿ ಪಟ್ಟಣದ ಮಿನಿ ವಿಧಾನಸೌಧದ ಕಚೇರಿ ಎದುರು ಕಿತ್ತೂರ ಕರ್ನಾಟಕ ಸೇನೆ ವತಿಯಿಂದ ಗಡಿ ಭಾಗದ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು   

ಚಿಕ್ಕೋಡಿ: ‘ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಚಿಕ್ಕೋಡಿ, ಅಥಣಿ, ಕಾಗವಾಡ, ಬೆಳಗಾವಿ, ನಿಪ್ಪಾಣಿ, ಹುಕ್ಕೇರಿ ಹಾಗೂ ಖಾನಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿ ಅಭಿವೃದ್ಧಿಪಡಿಸಬೇಕು’ ಎಂದು ಚಿಕ್ಕೋಡಿಯ ಹಿರಿಯ ಸಾಹಿತಿ ಎಸ್.ವೈ. ಹಂಜಿ ಒತ್ತಾಯಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಎದುರು ಕಿತ್ತೂರು ಕರ್ನಾಟಕ ಸೇನೆ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಮಾತನಾಡುತ್ತಾ, ‘ಜನಪ್ರತಿನಿಧಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಹಾಗೂ ಕನ್ನಡ ಮಾಧ್ಯಮದ ಶಾಲೆಗಳಲ್ಲಿ ದಾಖಲಿಸಿ ಶಿಕ್ಷಣ ಕೊಟ್ಟಲ್ಲಿ ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಸಾಧ್ಯವಿದೆ’ ಎಂದು ಹೇಳಿದರು.

ಕರ್ನಾಟಕ ಸೇನೆಯ ರಾಜ್ಯ ಅಧ್ಯಕ್ಷ ಮಹಾದೇವ ತಳವಾರ, ರಾಜ್ಯ ಯುವ ಘಟಕದ ಅಧ್ಯಕ್ಷ ರಾಜು ಕಿರಣಗಿ ಮಾತನಾಡಿ, ‘ಗಡಿ ಭಾಗದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪರಿಸ್ಥಿತಿಯು ಹೀನಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಮುಂತಾದ ಮೂಲ ಸೌಕರ್ಯ, ಶಿಕ್ಷಕರ ಕೊರತೆ ನೀಗಿಸಬೇಕು’ ಎಂದು ಕೇಳಿಕೊಂಡರು.

ADVERTISEMENT

ಚಿಕ್ಕೋಡಿ ತಹಶೀಲ್ದಾರ್ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ಕಿರಣ ಬೆಳವಿ ಅವರಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ನಾಗೇಶ ಮಾಳಿ, ಶಿವಾನಂದ ಕೋಲಕಾರ, ದೇವೇಂದ್ರ ತಳವಾರ, ಶಂಕರ ಪಾಟೀಲ, ಶಿವಾನಂದ ನವನ್ಯಾಳೆ, ನಾಗೇಶ ಕಾಡಾಪೂರೆ, ಅಶೋಕ ಪಾಟೀಲ, ರವಿ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.