ADVERTISEMENT

ಬೆಳಗಾವಿ: ಫಲಕಗಳಲ್ಲಿ ಮರಾಠಿ ಬಳಕೆಗೆ ಎಂಇಎಸ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 14:51 IST
Last Updated 8 ಅಕ್ಟೋಬರ್ 2021, 14:51 IST
ಬೆಳಗಾವಿ ನಗರದ ನಾಮಫಲಕಗಳಲ್ಲಿ ಮರಾಠಿ ಭಾಷೆಗೂ ಆದ್ಯತೆ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ  ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ಬೆಳಗಾವಿ ನಗರದ ನಾಮಫಲಕಗಳಲ್ಲಿ ಮರಾಠಿ ಭಾಷೆಗೂ ಆದ್ಯತೆ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ  ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ನಗರದ ನಾಮಫಲಕಗಳಲ್ಲಿ ಮರಾಠಿ ಭಾಷೆಗೂ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

‘ಬೆಳಗಾವಿ ಬಹುಸಂಸ್ಕೃತಿಯ ನಗರವಾಗಿದೆ. ಇಲ್ಲಿ ಶೇ. 15ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ಭಾಷಿಕರು ಇದ್ದಾರೆ. ಭಾಷಾ ಅಲ್ಪಸಂಖ್ಯಾತ ಆಯೋಗದ ನಿರ್ದೇಶನದಂತೆ ಇಲ್ಲಿ ತ್ರಿಭಾಷಾ ಸೂತ್ರ ಅಳವಡಿಸಬೇಕು’ ಎಂದು ಕೋರಿದ್ದಾರೆ.

‘ಸ್ಮಾರ್ಟ್ ಸಿಟಿ ಯೋಜನೆಯಲ್ಲಿಡಿ ಕೈಗೊಂಡಿರುವ ಕಾಮಗಾರಿಗಳ ಫಲಕದಲ್ಲಿ ಮರಾಠಿ ಭಾಷೆ ಬಳಸಬೇಕು. ಇಂಗ್ಲಿಷ್ ಮತ್ತು ಕನ್ನಡ ಭಾಷೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಭಾಷಾ ಅಲ್ಪಸಂಖ್ಯಾತರಾದ ನಮಗೆ ಮಾಹಿತಿ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಅ. 25ರಂದು ಪ್ರತಿಭಟನೆ ನಡೆಸಲಾಗುವುದು’ ಎಂದು ಗಡುವು ನೀಡಿದ್ದಾರೆ.

ADVERTISEMENT

ಮುಖಂಡರಾದ ದೀಪಕ ದಳವಿ, ಮನೋಹರ ಕಿಣೇಕರ, ವಿಕಾಸ ಕಲಘಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.