ಬೆಳಗಾವಿ: ‘ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವುದರಿಂದಾಗಿ, ವಿದ್ಯಾರ್ಥಿಗಳು ಪಡೆದಿರುವ ಶಿಕ್ಷಣ ಸಾಲ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
‘ಶಿಕ್ಷಣ ಸಾಲ ಪಡೆದು ವಿವಿಧ ಕೋರ್ಸ್‌ಗಳನ್ನು ಮುಗಿಸಿರುವ ಯುವಜನರು ಉದ್ಯೋಗ ಸಿಗದೇ ಪರದಾಡುತ್ತಿದ್ದಾರೆ. ನಗರಗಳಲ್ಲಿ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಕೆಲವರು ಸಾಲ ತೀರಿಸಲು ಸಾಧ್ಯವಾಗದೇ ಬದುಕಿಗೆ ಶರಣು ಹೇಳುತ್ತಿರುವುದು ದುರಂತಗಳೂ ನಡೆಯುತ್ತಿವೆ. ಹೀಗಾಗಿ, ಅವರಿಗೆ ಸರ್ಕಾರ ಸ್ಪಂದಿಸಬೇಕು. ಶಿಕ್ಷಣ ಸಾಲ ಮನ್ನಾ ಮಾಡುವುದರೊಂದಿಗೆ, ನಿರುದ್ಯೋಗ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.
ಅಧ್ಯಕ್ಷ ಅಪ್ಪಾಸಾಬ ದೇಸಾಯಿ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.