ADVERTISEMENT

ಸಾರಿಗೆ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಿ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 15:41 IST
Last Updated 6 ಏಪ್ರಿಲ್ 2021, 15:41 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಬೆಳಗಾವಿ: ‘ಸಾರಿಗೆ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಸಹಾನುಭೂತಿಯಿಂದ ಪರಿಶೀಲಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಕಾರಣಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರ ದೊಡ್ಡ ಪರಿಣಾಮ ಎದುರಿಸುತ್ತಿವೆ. ಈಗಷ್ಟೇ ಪ್ರಯಾಣಿಕರು ಓಡಾಡುತ್ತಿದ್ದಾರೆ. ಕೋವಿಡ್ ಮತ್ತೆ ಹೆಚ್ಚಾಗುತ್ತಿದೆ. ಹೀಗಿರುವಾಗ, ಮುಷ್ಕರದ ಬದಲಿಗೆ ಆ ನೌಕರರು ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕು’ ಎಂದು ಸಲಹೆ ನೀಡಿದರು.

‘ಮೇ ಅಂತ್ಯದವರೆಗೆ ಅವರು ತಾಳ್ಮೆಯಿಂದ ಇರಬೇಕು. ಮುಷ್ಕರ ಕೈಬಿಡಬೇಕು’ ಎಂದು ಕೋರಿದರು.

ADVERTISEMENT

‘ನಕ್ಸಲರನ್ನು ಬೆಳೆಸಿದ್ದು ಯಾರೆನ್ನುವುದು ಎಲ್ಲರಿಗೂ ಗೊತ್ತಿದೆ. ನಮ್ಮ ಸರ್ಕಾರ ಬಂದ ನಂತರ ನಕ್ಸಲ್ ದಾಳಿ ಕಡಿಮೆ ಆಗಿವೆ. ನಕ್ಸಲಿಸಂ ತೊಡೆದು ಹಾಕಲು ಸಿದ್ಧರಿದ್ದೇವೆ. ಆದರೆ, ಈ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ದೇಶದ ಆಂತರಿಕ ಭದ್ರತೆಗೆ ಆದ್ಯತೆ ನೀಡುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.