ADVERTISEMENT

ಆರ್‌ಸಿಯು ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕುಲ‍ಪತಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 15:46 IST
Last Updated 5 ಆಗಸ್ಟ್ 2019, 15:46 IST
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮಾತನಾಡಿದರು
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಮಾತನಾಡಿದರು   

ಬೆಳಗಾವಿ: ‘ಕೌಶಲ ಆಧಾರಿತ ಹೊಸ ಕೋರ್ಸ್‌ಗಳ ಆರಂಭದೊಂದಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಶಿಕ್ಷಕ ಸಂಘದಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಲ್ಲಿ ಅಭಿವೃದ್ಧಿ ಕಾರ್ಯಕ್ರಮ ಕೈಗೊಂಡ ಹಾಗೂ ಮೂಲಸೌಲಭ್ಯ ಒದಗಿಸಿದ ಬಳಿಕ ಸನ್ಮಾನ ಸ್ವೀಕರಿಸುತ್ತೇನೆ’ ಎಂದರು.

ADVERTISEMENT

ಸಂಘದ ಅಧ್ಯಕ್ಷ ಪ್ರೊ.ಡಿ.ಎನ್. ಪಾಟೀಲ, ಪ್ರೊ.ಎಸ್.ಬಿ ಆಕಾಶ್, ಕುಲಸಚಿವರಾದ ಪ್ರೊ.ಬಸವರಾಜ ಪದ್ಮಶಾಲಿ, ಪ್ರೊ.ರಂಗರಾಜ ವನದುರ್ಗ, ಹಣಕಾಸು ಅಧಿಕಾರಿ ಶಂಕರಾನಂದ ಬನಶಂಕರಿ ಮಾತನಾಡಿದರು.

ಡಾ.ಶೋಭಾ ನಾಯಕ ನಿರೂಪಿಸಿದರು. ಡಾ.ಅಶೋಕ ಡಿಸೋಜಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.