ADVERTISEMENT

ಬಿಮ್ಸ್‌ಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ 3 ವೆಂಟಿಲೇಟರ್‌

​ಪ್ರಜಾವಾಣಿ ವಾರ್ತೆ
Published 29 ಮೇ 2021, 9:36 IST
Last Updated 29 ಮೇ 2021, 9:36 IST
ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದವರು ಒದಗಿಸಿದ ವೆಂಟಿಲೇಟರ್‌ಗಳನ್ನು ಶಾಸಕರಾದ ಅನಿಲ ಬೆನಕೆ ಮತ್ತು ಅಭಯ ಪಾಟೀಲ ಶುಕ್ರವಾರ ಹಸ್ತಾಂತರಿಸಿದರು
ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದವರು ಒದಗಿಸಿದ ವೆಂಟಿಲೇಟರ್‌ಗಳನ್ನು ಶಾಸಕರಾದ ಅನಿಲ ಬೆನಕೆ ಮತ್ತು ಅಭಯ ಪಾಟೀಲ ಶುಕ್ರವಾರ ಹಸ್ತಾಂತರಿಸಿದರು   

ಬೆಳಗಾವಿ: ಕೊರೊನಾ ವೈರಾಣು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ವಿನಂತಿ ಮೇರೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದವರು ₹ 15 ಲಕ್ಷ ಮೊತ್ತದ 3 ವೆಂಟಿಲೇಟರ್‌ಗಳನ್ನು ನೀಡಿದ್ದಾರೆ.

ಅವುಗಳನ್ನು ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌)ಗೆ ಶುಕ್ರವಾರ ಹಸ್ತಾಂತರಿಸಿದರು. ‘ಇದೇ ರೀತಿ ರಾಜ್ಯದ ಎಲ್ಲ ಕಡೆಗಳಿಗೂ ವೆಂಟಿಲೇಟರನ್ನು ನೀಡುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಅಭಿನಂದನೆಗೆ ಅರ್ಹರು’ ಎಂದು ಅಭಯ ಪಾಟೀಲ ಹೇಳಿದರು.

‘ಈಗಾಗಲೇ ಬಿಮ್ಸ್‌ ಆವರಣದಲ್ಲಿ 3 ಆಮ್ಲಜನಕ ತಯಾರಿಕಾ ಘಟಕಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.

ADVERTISEMENT

₹ 75 ಲಕ್ಷ ಅಂದಾಜು ವೆಚ್ಚದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ನಷ್ಟು ಆಮ್ಲಜನಕ ತಯಾರಿಕಾ ಘಟಕಕ್ಕೆ ಶಾಸಕರು ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.