ADVERTISEMENT

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ: ಸುರೇಶ ಇಟಗಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 5:57 IST
Last Updated 12 ಫೆಬ್ರುವರಿ 2026, 5:57 IST
ಹಿರೇಬಾಗೇವಾಡಿಯಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು
ಹಿರೇಬಾಗೇವಾಡಿಯಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು   

ಹಿರೇಬಾಗೇವಾಡಿ: ಸರ್ಕಾರದಷ್ಟೇ ಜವಾಬ್ದಾರಿಯುತ ಕಾರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುರೇಶ ಇಟಗಿ ಹೇಳಿದರು.

ಅವರು ಬುಧವಾರ ಇಲ್ಲಿನ ಮಾರುತಿ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬ್ಯಾಂಕ್ ಆಫ್‌ ಮಹಾರಾಷ್ಟ್ರ, ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಗ್ರಾಮೀಣ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ, ತರಬೇತಿ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ಮಹಿಳಾ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಜಪ್ತಿ, ಉದ್ಯಮಿ ಈರಣ್ಣ ರೊಟ್ಟಿ, ವೈದ್ಯರಾದ ಆನಂದ ಹಿರೇಮಠ, ಡಾ. ರೇಣಕಾರಾಧ್ಯ, ಡಾ. ಸಂದೀಪ ಪಾಟೀಲ, ಯೋಜನಾಧಿಕಾರಿ ಯೋಗೀಶ ಕೆ, ವಲಯ ಮೇಲ್ಚಿಚಾರಕಿ ಗಂಗಾ ಪಾಟೀಲ, ಸೇವಾ ಪ್ರತಿನಿಧಿ ಮಹಾದೇವಿ ಇಂಚಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.