ಯಮಕನಮರಡಿ: ‘ಘಟಪ್ರಭಾ ನದಿಯ ಹಿಡಕಲ್ ಜಲಾಶಯ ಈ ಭಾಗದ ರೈತರ ಜೀವನ ನಾಡಿ. ಯಾವ ಕಾರಣಕ್ಕೂ ಧಾರವಾಡದ ಕೈಗಾರಿಕಾ ಪ್ರದೇಶಕ್ಕೆ ಈ ಜಲಾಶಯದಿಂದ ನೀರು ಹರಿಸಬಾರದು’ ಎಂದು ಪಾಶ್ವಾಪುರದ ಸಾಮಾಜಿಕ ಹೋರಾಟಗಾರ, ಉಪನ್ಯಾಸಕ ನೀಲಕಂಠ ಭೂಮಣ್ಣವರ ಆಗ್ರಹಿಸಿದ್ದಾರೆ.
ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ರೈತರ ಭೂಮಿಗೆ ಹಾಗೂ ಬೆಳಗಾವಿ ನಗರ ಒಳಗೊಂಡು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಜಲಾಶಯ ಇದು’ ಎಂದರು.
‘ಕನ್ನಡಪರ ಸಂಘಟನೆಗಳು, ವಿವಿಧ ಮಠಾಧೀಶರ ಹೋರಾಟ, ಜನಪ್ರತಿನಿಧಿಗಳ ಒತ್ತಡದಿಂದಾಗಿ ಈ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಮತ್ತೆ ಕಾಮಗಾರಿ ಮುಂದುವರಿದಿದ್ದು, ಜನರಿಗೆ ಆತಂಕ ಸೃಷ್ಟಿ ಮಾಡಿದೆ. ನಮ್ಮ ಭಾಗದ ಜನಪ್ರತಿನಿಧಿಗಳು, ಸಾರ್ವಜನಿಕರು, ರೈತರು, ಹೋರಾಟಗಾರರು ಎಚ್ಚೆತ್ತುಕೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ನೀರಿನ ಅಭಾವ ಎದುರಿಸಬೇಕಾಗುತ್ತದೆ’ ಎಂದರು.
‘ಮೇ 2ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.