ADVERTISEMENT

ಚಿಕ್ಕೋಡಿ | ಬೋರಗಾಂವ ಪ.ಪಂ. ಅಧ್ಯಕ್ಷರಾಗಿ ದಿಗಂಬರ ಕಾಂಬಳೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 6:40 IST
Last Updated 20 ಜನವರಿ 2026, 6:40 IST
ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿಗಂಬರ ಕಾಂಬಳೆ ಅವರನ್ನು ಯುವ ಮುಖಂಡ ಉತ್ತಮ ಪಾಟೀಲ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಭಾರತಿ ವಸವಾಡೆ, ಶೋಭಾ ಹವಲೆ ಇತರರು ಹಾಜರಿದ್ದರು
ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದಿಗಂಬರ ಕಾಂಬಳೆ ಅವರನ್ನು ಯುವ ಮುಖಂಡ ಉತ್ತಮ ಪಾಟೀಲ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಭಾರತಿ ವಸವಾಡೆ, ಶೋಭಾ ಹವಲೆ ಇತರರು ಹಾಜರಿದ್ದರು   

ಚಿಕ್ಕೋಡಿ: ನಿಪ್ಪಾಣಿ ತಾಲ್ಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿಂಟು ಕಾಂಬಳೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ದಿಗಂಬರ ಕಾಂಬಳೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪರಿಶಿಷ್ಟ ಜಾತಿ ಪುರುಷ ಮೀಸಲಾತಿ ಹೊಂದಿದ್ದ ಬೋರಗಾಂವ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಉತ್ತಮ ಪಾಟೀಲ ಬಣದ ದಿಗಂಬರ ಕಾಂಬಳೆ ನಾಮಪತ್ರ ಸಲ್ಲಿಸಿದ್ದರು. 17 ಸದಸ್ಯ ಬಲದ ಪಟ್ಟಣ ಪಂಚಾಯಿತಿಯ 16 ಸದಸ್ಯರು ಉತ್ತಮ ಪಾಟೀಲ ಬಣದೊಂದಿಗೆ ಗುರುತಿಸಿಕೊಂಡಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದ್ದರಿಂದ ದಿಗಂಬರ ಕಾಂಬಳೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ನಿಪ್ಪಾಣಿ ತಹಶೀಲ್ದಾರ್‌ ಸುರೇಶ ಮುಂಜಿ ಘೋಷಿಸಿದರು.

ಯುವ ಮುಖಂಡ ಉತ್ತಮ ಪಾಟೀಲ ನೂತನ ಅಧ್ಯಕ್ಷ ದಿಗಂಬರ ಕಾಂಬಳೆ ಅವರನ್ನು ಅಭಿನಂದಿಸಿ ಮಾತನಾಡಿ, ‘ಬೋರಗಾಂವ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷ ದಿಗಂಬರ ಕಾಂಬಳೆ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ಮಾಡುವ ಮೂಲಕ ಬೋರಗಾಂವ ಪಟ್ಟಣ ಪಂಚಾಯಿತಿಯನ್ನು ಜಿಲ್ಲೆಯಲ್ಲಿ ಮಾದರಿ ಪಟ್ಟಣ ಪಂಚಾಯಿತಿಯನ್ನಾಗಿ ಮಾಡುತ್ತಾರೆ. ತಮ್ಮ ಬಣ ಕಳೆದ ಅವಧಿಯಲ್ಲೂ ಉತ್ತಮ ಕಾರ್ಯ ಮಾಡಿದ್ದು, ಮುಂದಿನ ಅವಧಿಯಲ್ಲಿ ಮುಂದುವರೆಯುತ್ತದೆ‘ ಎಂದು ಹೇಳಿದರು.

ADVERTISEMENT

ನೂತನ ಅಧ್ಯಕ್ಷ ದಿಗಂಬರ ಕಾಂಬಳೆ ಮಾತನಾಡಿ, ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಧೃಡ ಸಂಕಲ್ಪ ಹೊಂದಿದ್ದಾಗಿ ತಿಳಿಸಿದರು.

ಯುವ ನಾಯಕ ಉತ್ತಮ ಪಾಟೀಲ, ಅಭಿನಂದನ ಪಾಟೀಲ, ಉಪಾಧ್ಯಕ್ಷೆ ಭಾರತಿ ವಸವಾಡೆ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಭಯಕುಮಾರ ಮಗದುಮ್ಮ, ಪ್ರದೀಪ ಮಾಳಿ, ಪಿಂಟು ಕಾಂಬಳೆ, ಜಾವೇದ ಮಕಾಂದಾರ, ಶೋಭಾ ಹವಲೆ, ಮಾಣೀಕ ಕುಂಬಾರ, ಗಿರಿಜಾ ವಟಾರೆ, ರುಕ್ಸಾನಾ ಅಪರಾಜ್, ಅಶ್ವಿನಿ ಪವಾರ, ಮುಖ್ಯಾಧಿಕಾರಿ ಎಸ್ ಬಿ ತೋಡಕರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.