ಬೆಳಗಾವಿ: ತಾಲ್ಲೂಕಿನ ಹುದಲಿಯ ಬೆಲಗಮ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಗೆ 2023-24ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆಗೆ ಆಡಳಿತ ಮಂಡಳಿ ನಿರ್ಧರಿಸಿದೆ.
ರೈತರು ತಾವು ಪೂರೈಸಿದ ಪ್ರತಿ ಟನ್ ಕಬ್ಬಿಗೆ 500 ಗ್ರಾಂ(ಪ್ರತಿ ಕೆ.ಜಿಗೆ ₹20 ದರದಲ್ಲಿ) ಸಕ್ಕರೆಯನ್ನು ಜುಲೈ 22ರಿಂದ ಕಾರ್ಖಾನೆ ಆವರಣದಲ್ಲಿ ವಿತರಿಸಲಾಗುವುದು. ಸೂಕ್ತ ದಾಖಲೆ ತೋರಿಸಿ, ರೈತರು ಖುದ್ದಾಗಿ ಅಥವಾ ತಮ್ಮ ಪ್ರತಿನಿಧಿ ಮೂಲಕ ಸಕ್ಕರೆ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.