ADVERTISEMENT

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೋಗಿಗಳ ನೋಂದಣಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:19 IST
Last Updated 25 ನವೆಂಬರ್ 2020, 14:19 IST
ಎಂ.ಜಿ. ಹಿರೇಮಠ
ಎಂ.ಜಿ. ಹಿರೇಮಠ   

ಬೆಳಗಾವಿ: ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲ ಹೊರ ಹಾಗೂ ಒಳ ರೋಗಿಗಳ ನೋಂದಣಿ ಮತ್ತು ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಒಟ್ಟು 740 ಹಾಸಿಗೆಗಳು ಲಭ್ಯವಿದ್ದು, ಅದರಲ್ಲಿ 500 ಹಾಸಿಗೆಗಳನ್ನು ಕೋವಿಡೇತರ ರೋಗಿಗಳಿಗೆ ಹಾಗೂ 240 ಹಾಸಿಗೆಗಳನ್ನು ಕೋವಿಡ್-19 ಸೋಂಕಿತರ ಉಪಚಾರಕ್ಕಾಗಿ ಕಾಯ್ದಿರಿಸಲಾಗಿದೆ. ಪ್ರಾಥಮಿಕ ಹಾಗೂ ದ್ವೀತಿಯ ಹಂತದ ಚಿಕಿತ್ಸೆಗಳನ್ನು ಕೂಡ ಈಗಾಗಲೇ ಆರಂಭಿಸಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದಲ್ಲಿ ಮಾತ್ರ ರೋಗಿಯನ್ನು ಆಯುಷ್ಯಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ನೋಂದಾಯಿತವಾದ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT