ADVERTISEMENT

ಡಿಕೆಶಿ ಬಂಧನ ಖಂಡಿಸಿ ಬೆಂಬಲಿಗರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 12:26 IST
Last Updated 4 ಸೆಪ್ಟೆಂಬರ್ 2019, 12:26 IST
ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಬಲಿಗರು ಬೆಳಗಾವಿ ತಾಲ್ಲೂಕಿನ ಕರಡಿಗುದ್ದಿಯಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು
ಶಾಸಕ ಡಿ.ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಬಲಿಗರು ಬೆಳಗಾವಿ ತಾಲ್ಲೂಕಿನ ಕರಡಿಗುದ್ದಿಯಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು   

ಬೆಳಗಾವಿ: ಶಾಸಕ, ಕಾಂಗ್ರೆಸ್‌ ಮುಖಂಡ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ, ಅವರ ಬೆಂಬಲಿಗರು ತಾಲ್ಲೂಕಿನ ಬಾಚಿ–ರಾಯಚೂರು ರಾಜ್ಯ ಹೆದ್ದಾರಿ ತಡೆದು ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಹಳೆಯ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಸ್ತೆಯಲ್ಲಿ ಚಕ್ಕಡಿ ಇಟ್ಟು ಬಂದ್ ಮಾಡಿದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

‘ಕೇಂದ್ರ ಸರ್ಕಾರವು ಸೇಡಿನ ರಾಜಕಾರಣ ಮಾಡುತ್ತಿದೆ. ಇಡಿ ಬಳಸಿಕೊಂಡು ಕಾಂಗ್ರೆಸ್‌ ಮುಖಂಡರಿಗೆ ತೊಂದರೆ ಕೊಡುತ್ತಿದೆ. ಶಿವಕುಮಾರ್‌ ಅವರು ವಿಚಾರಣೆಗೆ ಸಹಕರಿಸುತ್ತಿದ್ದರೂ ಬಂಧಿಸಿರುವುದು ಸರಿಯಲ್ಲ’ ಎಂದು ಹೇಳಿದರು.

ADVERTISEMENT

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಂಕರಗೌಡ ಪಾಟೀಲ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.