ADVERTISEMENT

ಬೆಳಗಾವಿ| ಡಿ.ಕೆ.ಶಿವಕುಮಾರ್‌ ಬಳಿ ಹೆಚ್ಚು ಶಾಸಕರಿಲ್ಲ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 2:46 IST
Last Updated 25 ನವೆಂಬರ್ 2025, 2:46 IST
<div class="paragraphs"><p>ರಮೇಶ ಜಾರಕಿಹೊಳಿ</p></div>

ರಮೇಶ ಜಾರಕಿಹೊಳಿ

   

ಬೆಳಗಾವಿ: ‘ಡಿ.ಕೆ.ಶಿವಕುಮಾರ ಕಡೆ ಶಾಸಕರ ಸಂಖ್ಯೆ ಬಹಳ ಕಡಿಮೆ ಇದೆ. ಸುದ್ದಿವಾಹಿನಿಗಳಲ್ಲಿ ಸುಮ್ಮನೇ ಹವಾ ಮಾಡುತ್ತಾರೆ. ಕೇವಲ 50 ಶಾಸಕರನ್ನು ತೋರಿಸಿದರೆ, ಇವತ್ತೇ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ನಾನೇ ಒತ್ತಾಯಿಸುವೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಸವಾಲು ಹಾಕಿದರು.

‘ಮುಖ್ಯಮಂತ್ರಿ ಸ್ಥಾನದ ವಿಷಯದಲ್ಲಿ ಈ ವಿಚಾರದಲ್ಲಿ ನಾವು ಏನೂ ಮಾತನಾಡಬಾರದು. ಬಿಜೆಪಿ ತಟಸ್ಥವಾಗಿ ಉಳಿಯಬೇಕು. ಕಾಂಗ್ರೆಸ್‌ನವರು ಎಷ್ಟಾದರೂ ಕಚ್ಚಾಡಲಿ. ಅವರ ಹೊಲಸು ನಮ್ಮ ಮೈಮೇಲೆ ಹಾಕಿಕೊಳ್ಳಬಾರದು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಈ ಹಿಂದೆ ಮಹಾರಾಷ್ಟ್ರದಲ್ಲಿ ಆಡಳಿತ ಪಕ್ಷವೇ ಇಬ್ಭಾಗವಾಗಿ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿತು. ಅಂಥ ಪರಿಸ್ಥಿತಿ ರಾಜ್ಯದಲ್ಲಿ ಬರುವುದಿಲ್ಲ. ಇಲ್ಲಿ ಶಾಸಕರ ಸಂಖ್ಯಾಬಲದಲ್ಲಿ ಬಹಳ ವ್ಯತ್ಯಾಸವಿದೆ. ಅದಾಗಿಯೂ ಡಿ.ಕೆ.ಶಿವಕುಮಾರ್‌ ತಮ್ಮ ತಂಡ ಕರೆದುಕೊಂಡು ಬಿಜೆಪಿಗೆ ಬಂದರೆ ನಾವಂತೂ ಒಪ್ಪುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.