
ಪ್ರಜಾವಾಣಿ ವಾರ್ತೆಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಬಳಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಖಾಸಗಿ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರಿ ಬೈಕಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜೇಂದ್ರ ಪ್ರಸಾದ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.