ADVERTISEMENT

ಕೂಲಿಕಾರ್ಮಿಕರಿಗೆ ನೆರವು; ದಾನಿಗಳ ನೋಂದಣಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 12:49 IST
Last Updated 7 ಏಪ್ರಿಲ್ 2020, 12:49 IST

ಬೆಳಗಾವಿ: ‘ಕೋವಿಡ್–19ರ ಹಿನ್ನೆಲೆಯಲ್ಲಿ ಜಿಲ್ಲೆಯ ಕೂಲಿಕಾರ್ಮಿಕರು, ನಿರಾಶ್ರಿತರಿಗೆ ಅಗತ್ಯ ದಿನಸಿ ಪದಾರ್ಥಗಳನ್ನು, ವೈದ್ಯಕೀಯ ವಸ್ತುಗಳನ್ನು ಪೂರೈಸಲು ಮುಂದೆ ಬರುವ ದಾನಿಗಳನ್ನು ನೋಂದಣಿ ಮಾಡಿಕೊಳ್ಳಲು ಜಿಲ್ಲಾ ವೆಬ್‌ಸೈಟ್‌ನಲ್ಲಿ ಒಂದು ವೇದಿಕೆ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾ ಸಮನ್ವಯ ಸಮಿತಿಯ ಸಂಚಾಲಕರಾಗಿರುವ ಶಶಿಧರ ಕುರೇರ ತಿಳಿಸಿದ್ದಾರೆ.

ಇಲ್ಲಿನ ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವುದು, ವಲಸೆ ಬಂದಂತಹ ಕೂಲಿ ಕಾರ್ಮಿಕರು ಮತ್ತು ನಿರಾಶ್ರಿತರಿಗೆ ದಿನನಿತ್ಯದ ಅವಶ್ಯಕ ಆಹಾರ ಪದಾರ್ಥಗಳನ್ನು ವಿತರಿಸುವುದು, ಮಾಸ್ಕ್, ಸ್ಯಾನಿಟರೈಸರ್ ಮುಂತಾದವುಗಳನ್ನು ಉಚಿತವಾಗಿ ನೀಡಲು ಬಯಸುವ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ’ ಎಂದರು.

ADVERTISEMENT

‘ಜಿಲ್ಲೆಯ ಎಲ್ಲಾ ಆಸಕ್ತವುಳ್ಳ ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕ ಸೇವಾ ಸಂಸ್ಥೆಗಳು, ಸಹಕಾರ ಗುಂಪುಗಳು, ವ್ಯಕ್ತಿಗಳು ಮತ್ತು ಮದ್ಯಸ್ಥಗಾರರು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ನೊಂದಣಿಗಾಗಿ ವೆಬ್ ವಿಳಾಸ: https://belagavi.nic.in/en/covid-19-registration-of-volunteers ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯವಾಣಿ ಸಂಖ್ಯೆ: 0831– 2424284 ಗೆ ಸಂಪರ್ಕಿಸುವುದು’ ಎಂದರು.

ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ‌.ಎಚ್., ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಸಮಿತಿಯ ಸದಸ್ಯರು, ರೆಡ್ ಸಂಸ್ಥೆಯ ಪದಾಧಿಕಾರಿಗಳು, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.