ADVERTISEMENT

ಅಸಂಘಟಿತ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್: ₹ 8 ಲಕ್ಷ ಅನುದಾನ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 10:22 IST
Last Updated 31 ಮಾರ್ಚ್ 2020, 10:22 IST
ಬೆಳಗಾವಿಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ₹ 8 ಲಕ್ಷ ಅನುದಾನದ ಚೆಕ್ ನೀಡಲಾಯಿತು
ಬೆಳಗಾವಿಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ₹ 8 ಲಕ್ಷ ಅನುದಾನದ ಚೆಕ್ ನೀಡಲಾಯಿತು   

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆ ವತಿಯಿಂದ ರೆಡ್‌ಕ್ರಾಸ್ ಸಂಸ್ಥೆಗೆ ₹ 8 ಲಕ್ಷ ಅನುದಾನದ ಚೆಕ್ ನೀಡಲಾಯಿತು.

ಶಾಸಕ ಅನಿಲ್ ಬೆನಕೆ ಸಮ್ಮುಖದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಚೆಕ್ ಸ್ವೀಕರಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾ ಶಾಖೆ ಅಧ್ಯಕ್ಷ ಅಶೋಕ ಬಾದಾಮಿ, ಕಾರ್ಯದರ್ಶಿ ಡಾ.ಡಿ.ಎನ್. ಮಿಸಾಳೆ, ಕಾರ್ಮಿಕ ಇಲಾಖೆ ಅಧಿಕಾರಿಗಳಾದ ತರನ್ನುಮ್, ಮಲ್ಲಿಕಾರ್ಜುನ ಜೋಗೂರ, ಕಾರ್ಮಿಕ ನಿರೀಕ್ಷಕ ಅನಿಲ್ ಬಗಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.