
ಪ್ರಜಾವಾಣಿ ವಾರ್ತೆ
ಬೆಳಗಾವಿ: ‘ಹುಬ್ಬಳ್ಳಿಯಲ್ಲಿ ನಡೆಸಲಾಗುತ್ತಿದೆ ಎನ್ನುವ ಕಾರಣಕ್ಕೆ ಹೂಡಿಕೆದಾರರ ಸಮಾವೇಶವನ್ನು ಬೆಳಗಾವಿಯ ಉದ್ಯಮಿಗಳು ಬಹಿಷ್ಕರಿಸುವುದು ಸರಿಯಲ್ಲ. ಸರ್ಕಾರವು ಬೆಳಗಾವಿಗೂ ವಿಶೇಷ ಆದ್ಯತೆ ನೀಡುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.
ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಸಹಜವಾಗಿಯೇ ತವರಿನ ಪ್ರೀತಿಯಿಂದಾಗಿ ಅಲ್ಲಿ ಆಯೋಜಿಸಿರಬಹುದು. ಆದರೆ, ಬೆಳಗಾವಿಗೂ ಹೂಡಿಕೆಗೆ ಯೋಜನೆಗಳಿವೆ. ಇಲ್ಲಿ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಏನು ಅಗತ್ಯವೋ ಅದನ್ನು ಕೊಡುವುದಕ್ಕೆ ಸರ್ಕಾರ ಸಿದ್ಧವಿದೆ’ ಎಂದು ಪ್ರತಿಕ್ರಿಯಿಸಿದರು.
‘ಮುಂದಿನ ದಿನಗಳಲ್ಲಿ ಇಲ್ಲೂ ಹೂಡಿಕೆದಾರರ ಸಮಾವೇಶ ನಡೆಸುವಂತೆ, ಸುವರ್ಣ ವಿಧಾನಸೌಧ ಸದ್ಬಳಕೆ ಮಾಡಿಕೊಳ್ಳವಂತೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.