ADVERTISEMENT

ಮಲಪ್ರಭಾ ಜಲಾಶಯ ಭರ್ತಿಯಾಗದೇ ನೀರು ಬಿಡುಗಡೆ ಬೇಡ: ಕೋನರಡ್ಡಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 12:54 IST
Last Updated 11 ಆಗಸ್ಟ್ 2020, 12:54 IST
ಸವದತ್ತಿ ತಾಲ್ಲೂಕಿನ ಮಲಪ್ರಭಾ ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಹರಿಸದಂತೆ ಒತ್ತಾಯಿಸಿ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು

ಬೆಳಗಾವಿ: ‘ಸವದತ್ತಿ ತಾಲ್ಲೂಕಿನ ಮಲಪ್ರಭಾ (ನವಿಲುತೀರ್ಥ) ಜಲಾಶಯ ಭರ್ತಿಯಾಗುವ ಮುನ್ನವೇ ನದಿಗೆ ನೀರು ಹರಿಸಬಾರದು’ ಎಂದು ಒತ್ತಾಯಿಸಿ ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಇಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ ಮತ್ತು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಜಲಾಶಯ ತುಂಬದೆ ನೀರು ಹೊರಬಿಡುವುದು ತಪ್ಪು. ಹೆಚ್ಚಿನ ಮಳೆ ಬಂದರೆ ತೊಂದರೆ ಆಗಬಹುದೆಂದು ಭಾವಿಸಿ ನೀರು ಬಿಡುಗಡೆ ಮಾಡಿತ್ತಿದ್ದೀರಿ. ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಯ ನರಗುಂದ, ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ, ಬೈಲಹೊಂಗಲ, ಬದಾಮಿ, ರಾಮದುರ್ಗ, ಖಾನಾಪುರ, ರೋಣ, ಗದಗ, ಗುಳೇದಗುಡ್ಡ, ಹುನುಗುಂದ ಭಾಗದ ಕುಡಿಯುವ ಉದ್ದೇಶಕ್ಕಾಗಿ ಹಾಗೂ ನೀರಾವರಿಗೆ ಇಟ್ಟುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಧರ್ಮರಾಜ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.