ಹಿರೇಬಾಗೇವಾಡಿ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ಆನಂತರ ಮಾತನಾಡಿದ ಅವರು, ಹಿರೇಬಾಗೇವಾಡಿ ಅತ್ಯಂತ ಪ್ರಮುಖವಾದ ಗ್ರಾಮವಾಗಿದ್ದು, ಗ್ರಾಮಕ್ಕೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ತರಲಾಗಿದೆ. ಮುಂಬರುವ ದಿನಗಳಲ್ಲಿ ಮುರಾರ್ಜಿ ವಸತಿ ಶಾಲೆ ಸೇರಿದಂತೆ ಅನೇಕ ಯೋಜನೆಗಳನ್ನು ಆರಂಭಿಸಲಾಗುವುದು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯೋನ್ಮುಖರಾಗಿದ್ದು ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.
ಕಲ್ಲಯ್ಯ ಸ್ವಾಮಿ ಉದೇಶಿಮಠ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾವತಿ ನಾಯ್ಕರ, ಸದಸ್ಯರಾದ ಸ್ವಾತಿ ಇಟಗಿ, ಸುರೇಶ ಇಟಗಿ, ಗೌಸಮೊದ್ದಿನ ಜಾಲಿಕೊಪ್ಪ, ಆನಂದಗೌಡ ಪಾಟೀಲ, ಅಡಿವೇಶ ಇಟಗಿ, ಪ್ರಕಾಶ ಜಪ್ತಿ, ಅನಿಲ ಪಾಟೀಲ, ರಾಜಶೇಖರ ಪಾಟೀಲ, ರಘು ಪಾಟೀಲ,ಅಬ್ದುಲ ಖತೀಬ,ರಾಜು ಬಾವಿಮನಿ, ಗಂಗಾಧರ ಅಗಸಿಮನಿ, ಮಹಾಂತೇಶ ಹಂಚಿನಮನಿ, ರವಿ ಗಾಣಗಿ, ನಿಂಗಪ್ಪ ತಳವಾರ, ಅಡಿವೆಪ್ಪ ತೋಟಗಿ, ಸಲೀಂ ಸತ್ತಿಗೇರಿ, ಪುಂಡಲೀಕ ಕೆಳಗೇರಿ,ಶೀಪು ಹಳೆಮನಿ, ಅಪ್ಪುಶ ಬೆಟಗೇರಿ, ಇದ್ದರು
ಭೋಜನಾಲಯ ಉದ್ಘಾಟನೆ: ಇಲ್ಲಿನ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಭೋಜನಾಲಯ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು. ಶಾಲೆಗೆ ಅಗತ್ಯವಿರುವ ಪರಿಕರಗಳನ್ನು ಒದಗಿಸುವ ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾವತಿ ನಾಯ್ಕರ, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು, ಸದಸ್ಯರು ಶಾಲಾ ಸಿಬ್ಬಂದಿ ಹಾಗೂ ಗ್ರಾಮ ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.