ADVERTISEMENT

ರಜೆ ಕೊಡದ್ದಕ್ಕೆ ಬಸ್ಸಿನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಚಾಲಕ!

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2025, 5:25 IST
Last Updated 2 ಏಪ್ರಿಲ್ 2025, 5:25 IST
<div class="paragraphs"><p>ಬಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕ ಬಾಲಚಂದ್ರ ಶಿವಪ್ಪ ಹುಕ್ಕೋಜಿ</p></div>

ಬಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಾಲಕ ಬಾಲಚಂದ್ರ ಶಿವಪ್ಪ ಹುಕ್ಕೋಜಿ

   

ಬೆಳಗಾವಿ: ಬಸ್ ಚಾಲಕನೊಬ್ಬ ಬಸ್ಸಿನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎರಡನೇ ಡಿಪೊದಲ್ಲಿ ಬುಧವಾರ ನಡೆದಿದೆ.

ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಅದೇ ಬಸ್ಸಿನಲ್ಲಿ ಬುಧವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ADVERTISEMENT

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ಎರಡು ವಾರಗಳ ಹಿಂದಷ್ಟೇ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮೆಕ್ಯಾನಿಕ್ ಕೂಡ ಬಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.