ADVERTISEMENT

ಇ–ಕೆವೈಸಿ: ಸೆ.10ರ ಗಡುವು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 15:49 IST
Last Updated 30 ಆಗಸ್ಟ್ 2021, 15:49 IST

ಬೆಳಗಾವಿ: ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರು ಅವರ ಕುಟುಂಬದಲ್ಲಿರುವ ಎಲ್ಲ ಸದಸ್ಯರೂ ಸೆ.1ರಿಂದ ಸೆ.10ರ ಒಳಗೆ ಇ-ಕೆವೈಸಿ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ.

‘ಇದರ ಪ್ರಯೋಜನವನ್ನು ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರೂ ಪಡೆದುಕೊಳ್ಳಬೇಕು. ಕುಟುಂಬದಲ್ಲಿರುವ ಎಲ್ಲ ಸದಸ್ಯರ ಇ-ಕೆವೈಸಿಯನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ತಪ್ಪಿದಲ್ಲಿ ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿ ಸದಸ್ಯರಿಗೆ ಅಕ್ಟೋಬರ್‌ನಿಂದ
ಪಡಿತರ ಹಂಚಿಕೆ ತಡೆಹಿಡಿಯಲಾಗುವುದು’ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಪ್ರಸ್ತುತ 68,886 ಅಂತ್ಯೋದಯ ಪಡಿತರ ಚೀಟಿಗಳು ಹಾಗೂ 10,67,173 ಆದ್ಯತಾ ಪಡಿತರ ಚೀಟಿಗಳು ಹಾಗೂ 3,05,610 ಆದ್ಯತೇತರ ಪಡಿತರ ಚೀಟಿಗಳು ಚಾಲ್ತಿಯಲ್ಲಿವೆ. ಇ-ಕೆವೈಸಿ ಸಂಗ್ರಹಣೆಗೆ ನ್ಯಾಯಬೆಲೆ ಅಂಗಡಿಕಾರರು ಹಣ ಕೇಳಿದ್ದಲ್ಲಿ ಅಥವಾ ದೂರುಗಳು ಇದ್ದರೆ ಆಯಾ ತಹಶೀಲ್ದಾರ್‌ ಅಥವಾ ಸಹಾಯಕ ನಿರ್ದೇಶಕರಿಗೆ ನೀಡಬಹುದು’ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.