ಹುಕ್ಕೇರಿ: ‘ಮಕ್ಕಳನ್ನು ಶಾಲೆಗೆ ಕಳುಹಿಸಿ ವಿದ್ಯಾವಂತರನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಮಕ್ಕಳನ್ನು ದುಡಿಮೆಗೆ ಕಳುಹಿಸಿದರೆ ಪಾಲಕರಿಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಹೇಳಿದರು.
ತಾಲ್ಲೂಕಿನ ಕೊಟಬಾಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಜರುಗಿದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಉದ್ಘಾಟಿಸಿ ಅವರು ಮಾತನಾಡಿದರು.
ಬಡ ವರ್ಗದ ಬಾಲಕರಿಗೆ ಸರ್ಕಾರ ಶೈಕ್ಷಣಿಕವಾಗಿ ವಸತಿ ಸಹಿತ ವಿವಿಧ ಯೋಜನೆ ರೂಪಿಸಿದ್ದು. ಅದರ ಸದ್ಬಳಕೆ ಮಾಡಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲ ಮಾಡಬೇಕು ಎಂದು ಹೇಳಿದರು.
ಕಿರಿಯ ಸಿವಿಲ್ ನ್ಯಾಯಾಧೀಶ ಆದಿತ್ಯ ಕಲಾಲ್ ಮಾತನಾಡಿ, ‘ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದರು.
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೆಶಕಿ ಜ್ಯೋತಿ ಕಾಂತೆ ಮಾತನಾಡಿ, ‘ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದು ಉತ್ತಮ ಶಿಕ್ಷಣ ಪಡೆದು ಉತ್ತಮ ಉದ್ಯೋಗ ಪಡೆದು ಸಮಾಜ ಸೇವೆ ಮಾಡಬೇಕು. ಬಾಲ ಕಾರ್ಮಿಕರಾಗಿ ಜೀವನ ಹಾಳು ಮಾಡಿಕೊಳ್ಳಬಾರದು’ ಎಂದು ಸಲಹೆ ನೀಡಿದರು. ಮುಖ್ಯ ಶಿಕ್ಷಕ ಎಸ್.ಎಂ. ಸೋನಾವಣೆ ಅಧ್ಯಕ್ಷತೆ ವಹಿಸಿದ್ದರು.
ಕೊಟಬಾಗಿ ಗ್ರಾಮ ಪಂಚಾಯಿತಿ ವತಿಯಿಂದ, ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ನ್ಯಾಯಾಧೀಶರನ್ನು ಸನ್ಮಾನಿಸಿದರು.
ಬೇಮುಲ್ ನಿರ್ದೇಶಕ ರಾಯಪ್ಪ ಡೂಗ, ಮುಖಂಡರಾದ ಬಸವರಾಜ ಭೂಸಾರಿ, ಘಟಿಗೆಪ್ಪ ಪೋಕಳಿ, ವಕೀಲರ ಸಂಘದ ಅಧ್ಯಕ್ಷ ಕೆ ಬಿ ಕುರಬೇಟ, ಸಿಡಿಪಿಒ ಹರಿಪ್ರಸಾದ್, ಕಾರ್ಮಿಕ ಇಲಾಖೆ ಅಧಿಕಾರಿ ನಾಗಪ್ಪ ಕಳಸನ್ನವರ, ಎಜಿಪಿ ಅನೀಲ್ ಕರೋಶಿ, ಎಪಿಪಿ ಶೇಖರ್ ಭಡಗಾಂವೆ, ಉಪಾಧ್ಯಕ್ಷ ಬಿ.ಎಂ. ಜಿನರಾಳೆ, ಕಾರ್ಯದರ್ಶಿ ಎಸ್.ಜಿ. ನದಾಫ್, ಸಹ ಕಾರ್ಯದರ್ಶಿ ವಿಠ್ಠಲ್ ಘಸ್ತಿ, ಖಜಾಂಚಿ ಅಂಬರೀಶ್ ಬಾಗೆವಾಡಿ, ಮಹಿಳಾ ಪ್ರತಿನಿಧಿ ಅನಿತಾ ಕುಲಕರ್ಣಿ, ವಕೀಲರಾದ ಎಸ್.ವೈ. ಎಗನ್ನವರ, ಆಶಾ ಸಿಂಗಾಡಿ ಇದ್ದರು. ಗ್ರಾಮದಲ್ಲಿ ಅರಿವು ಮೂಡಿಸುವ ಜಾಥಾ ನಡೆಯಿತು. ಶಿಕ್ಷಕ ಆರ್.ಎಂ. ವಿರಕ್ತಮಠ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಎಸ್.ಎಂ. ಸೋನಾವಣೆ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.