ADVERTISEMENT

‘ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬೇಡಿ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:54 IST
Last Updated 18 ಜೂನ್ 2025, 15:54 IST
ಬೆಳಗಾವಿಯ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 10ನೇ ತರಗತಿ(ಸಿಬಿಎಸ್‌ಇ) ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಬೆಳಗಾವಿಯ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 10ನೇ ತರಗತಿ(ಸಿಬಿಎಸ್‌ಇ) ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು   

ಬೆಳಗಾವಿ: ಇಲ್ಲಿನ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ 10ನೇ ತರಗತಿ(ಸಿಬಿಎಸ್‌ಇ) ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್.ಬಿ.ಕುಲಕರ್ಣಿ ಮಾತನಾಡಿ, ‘ಪಾಲಕರು ತಮ್ಮ ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬಾರದು. ನಿಜವಾಗಿಯೂ ಅವರು ಸಾಧನೆ ಮಾಡಬಲ್ಲ ಕ್ಷೇತ್ರಗಳಲ್ಲಿ ಮುಂದುವರಿಯಲು ಸ್ವಾತಂತ್ರ್ಯ ನೀಡಬೇಕು’ ಎಂದು ಸಲಹೆ ನೀಡಿದರು.

ಶಾಲೆ ಸಂಸ್ಥಾಪಕ ಅಧ್ಯಕ್ಷ ಪಿ.ಡಿ.ಕಾಳೆ, ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಆರ್‌.ಕೆ.ಪಾಟೀಲ, ಉಪಾಧ್ಯಕ್ಷ ಪ್ರೊ.ಆರ್‌.ಎಸ್‌.ಪಾಟೀಲ, ಕಾರ್ಯದರ್ಶಿ ಪ್ರೊ.ನಿತಿನ ಘೋರ್ಪಡೆ, ಮಾಯಾದೇವಿ ಅಗಸಗೇಕರ, ಪ್ರಾಚಾರ್ಯೆ ಸೋನಾಲಿ ಕಂಗ್ರಾಳಕರ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.