ADVERTISEMENT

ಉದ್ಯೋಗ ಖಾತ್ರಿ ಯೋಜನೆ: ವೇತನ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 5:36 IST
Last Updated 17 ಜುಲೈ 2025, 5:36 IST
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯು ಗೋಕಾಕದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಜಮಾಯಿಸಿ 6 ತಿಂಗಳ ವೇತನ ಪಾವತಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯು ಗೋಕಾಕದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಜಮಾಯಿಸಿ 6 ತಿಂಗಳ ವೇತನ ಪಾವತಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು   

ಗೋಕಾಕ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರು ತಿಂಗಳ ವೇತನ ಪಾವತಿಸುವಂತೆ ಕರ್ನಾಟಕ ರಾಜ್ಯ ಮನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಪ್ರತಿಭಟಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕಳೆದ ಆರು ತಿಂಗಳಿನಿಂದ ಮನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವೇತನ ಪಾವತಿ ಆಗದಿರುವುದರಿಂದ ಕುಟುಂಬ ನಿರ್ವಹಣೆಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ವೇತನ ಪಾವತಿಯಾಗದಿದ್ದರೆ ಕೆಲಸ ಕಾರ್ಯಗಳನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಲಿದೆ. ಕರ್ನಾಟಕ ರಾಜ್ಯದಲ್ಲಿ ಸಾವಿರಾರು ಅಕುಶಲ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ನೀಡುತ್ತಿರುವ ನಮಗೆ ಉದ್ಯೋಗದಲ್ಲಿ ಖಾತ್ರಿ ಇರುವುದಿಲ್ಲ. ನಮ್ಮ ಸಿಬ್ಬಂದಿ ಸಂಬಳವು ನಿಗದಿತ ಕಾಲಕಾಲಕ್ಕೆ ಪರಿಷ್ಕರಣೆಯಾಗದೆ ಕಡಿಮೆ ವೇತನದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಯಾವುದೇ ಸೇವಾ ಭದ್ರತೆಯಾಗಲಿ, ಸೇವಾ ರಕ್ಷಣೆಯಾಗಲಿ ದೊರೆಯುತ್ತಿಲ್ಲ. ಹೊರ ಗುತ್ತಿಗೆ ಸಂಸ್ಥೆಗಳಿಂದ ಶೋಷಣೆಗೆ ಒಳಗಾಗಿ ಮಾನಸಿಕವಾಗಿ ನೊಂದಿದ್ದೇವೆ. ಹೊರ ಗುತ್ತಿಗೆ ಆಧಾರದ ಮೇರೆಗೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಸೇವೆಯನ್ನು ಸರ್ಕಾರಿ ಸೇವೆಯಾಗಿ ಕಾಯಂಗೊಳಿಸುವಂತೆ ಮನವಿ ಮೂಲಕ ಒತ್ತಾಯಿಸಲಾಗಿದೆ.

ನೌಕರರ ಸಂಘದ ಅಧ್ಯಕ್ಷ ವಿನಾಯಕ ಮಾಳಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಧೀರ ಜಮಖಂಡಿ, ಜಿಲ್ಲಾ ಉಪಾಧ್ಯಕ್ಷ ವೀರಭದ್ರ ಗುಂಡಿ, ನರೇಗಾ ತಾಂತ್ರಿಕ ಸಂಯೋಜಕರು, ಎಂ.ಐ.ಎಸ್‌. ಸಂಯೋಜಕರು, ಐ.ಇ.ಪಿ. ಸಂಯೋಜಕರು, ಆಡಳಿತ ಸಹಾಯಕರು, ತಾಂತ್ರಿಕ ಸಹಾಯಕರು, ಬಿಎಸ್ಟಿ ಗ್ರಾಮ ಸಹಾಯಕ ಮಿತ್ರರು ಸೇರಿದಂತೆ ಅನೇಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.