ADVERTISEMENT

ಎಲ್ಲ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪನೆ: ಅಶ್ವತ್ಥನಾರಾಯಣ

ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 22:33 IST
Last Updated 15 ಡಿಸೆಂಬರ್ 2021, 22:33 IST
ಬೆಳಗಾವಿಯ ವಿಟಿಯುನಲ್ಲಿ ಬುಧವಾರ ನಡೆದ ‘ಜ್ಞಾನಯೋಗ ಫೆಲೋಶಿಪ್‌’ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು. ಕುಲಸಚಿವ ಪ್ರೊ.ಬಿ.ಈ. ರಂಗಸ್ವಾಮಿ, ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಇದ್ದಾರೆ
ಬೆಳಗಾವಿಯ ವಿಟಿಯುನಲ್ಲಿ ಬುಧವಾರ ನಡೆದ ‘ಜ್ಞಾನಯೋಗ ಫೆಲೋಶಿಪ್‌’ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದರು. ಕುಲಸಚಿವ ಪ್ರೊ.ಬಿ.ಈ. ರಂಗಸ್ವಾಮಿ, ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಇದ್ದಾರೆ   

ಬೆಳಗಾವಿ: ‘ರಾಜ್ಯದಲ್ಲಿ ಎಲ್ಲೆಲ್ಲಿ ವಿಶ್ವವಿದ್ಯಾಲಯಗಳು ಇಲ್ಲವೋ ಆ ಜಿಲ್ಲೆಗಳಲ್ಲಿ ತ್ವರಿತವಾಗಿ ವಿವಿ ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನದ ಜೊತೆಗೆ, ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ‘ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಬುಧವಾರ ಮಾತನಾಡಿದರು.

‘ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆ ಹಾಕಿಕೊಳ್ಳಲಾಗಿದೆ. 120 ಎಕರೆ ವಿಶಾಲ ಜಾಗ ಹೊಂದಿರುವ ವಿಟಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ದಪ್ಪ ಅವರು ತಿಂಗಳಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು.

ADVERTISEMENT

ಫೆಲೋಶಿಪ್: ವಿಟಿಯು ಹಮ್ಮಿಕೊಂಡಿರುವ ಜ್ಞಾನಯಾನ ಫೆಲೋಶಿಪ್ ಕಾರ್ಯಕ್ರಮದಲ್ಲಿ ಸಚಿವರು, 22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.