
ಬೈಲಹೊಂಗಲ: ‘ಬೆಳಗಾವಿ ಕರ್ನಾಟಕದ್ದೆ ಎಂದು ಹೇಳಲು ನಮ್ಮಗೆಲ್ಲ ಹೆಮ್ಮೆ ಎನಿಸುತ್ತದೆ. ಬೆಳಗಾವಿ ಗಡಿ ವಿವಾದ, ತಂಟೆ ಬಂದಾಗ ಮೊದಲು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುವವರು ಬೈಲಹೊಂಗಲ ನಾಡಿನವರು. ಇದು ಹೆಮ್ಮೆಯ ಸಂಗತಿ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ಪುರಸಭೆ, ತಾಲ್ಲೂಕು ಪಂಚಾಯಿತಿ, ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ನಾಡು-ನುಡಿ, ಜಲ, ಮಣ್ಣಿನ ಬಗ್ಗೆ ಗೌರವ ಹೊಂದಿರಬೇಕು. ಧಕ್ಕೆಯಾದಾಗ ಪ್ರಾಣ ಪಣಕ್ಕಿಡಲು ಸಿದ್ಧರಾಗಿರಬೇಕು. ಕನ್ನಡ ಹಬ್ಬವನ್ನು ತಾಲ್ಲೂಕು ಆಡಳಿತ ಅರ್ಥಪೂರ್ಣವಾಗಿ ಆಚರಿಸಿದ್ದು ಖುಷಿ ತಂದಿದೆ’ ಎಂದರು.
ತಹಶೀಲ್ದಾರ್ ಹನುಮಂತ ಶಿರಹಟ್ಟಿ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮಾತನಾಡಿದರು. ಎಸಿ ಪ್ರವೀಣ ಜೈನ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ವಿಶೇಷ ಆಹ್ವಾನಿತರಾಗಿ ಪುರಸಭೆ ಅಧ್ಯಕ್ಷ ವಿಜಯ ಬೋಳಣ್ಣವರ, ಉಪಾಧ್ಯಕ್ಷ ಬುಡ್ಡೇಸಾಬ ಶಿರಸಂಗಿ, ತಾಲೂಕಾಧ್ಯಕ್ಷ ಎನ್.ಆರ್.ಠಕ್ಕಾಯಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮೋಹನ ಪಾಟೀಲ, ಸಿಡಿಪಿಒ ಅರುಣಕುಮಾರ ಇದ್ದರು.
ತಾ.ಪಂ.ಇಒ ಸಂಜೀವ ಜುನ್ನೂರ, ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಪುರಸಭೆ ಮುಖ್ಯಾಧಿಕಾರಿ ವಿರೇಶ ಹಸಬಿ, ಬಿಇಒ ಎ.ಎನ್.ಪ್ಯಾಟಿ, ಸಿಪಿಐ ಪ್ರಮೋದ ಯಲಿಗಾರ, ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ, ಅರೋಗ್ಯ ಅಧಿಕಾರಿ ಡಾ.ಎಸ್.ಎಸ್. ಸಿದ್ದನ್ನವರ, ನವನಿರ್ಮಾಣ ಪಡೆ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ತುರಮರಿ, ಕಂದಾಯ ನಿರೀಕ್ಷಕ ಬಸವರಾಜ ಬೋರಗಲ್, ಗ್ರಾಮ ಲೆಕ್ಕಾಧಿಕಾರಿ ಪರಮಾನಂದ ಕಮ್ಮಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು, ಗಣ್ಯರು ಇದ್ದರು. ರಾಜು ಹಕ್ಕಿ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ರವಿ ಹಿರೇಮಠ ವಂದಿಸಿದರು.
ಭವ್ಯ ಮೆರವಣಿಗೆ: ಪುರಸಭೆ ಆವರಣದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.