ಬೆಳಗಾವಿ: ‘ಬೆಂಗಳೂರು–ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.
‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.