ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳನ್ನು 30 ವರ್ಷಗಳ ನಂತರ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ತಮಿಳುನಾಡಿನ ಶಿವಕಾಶಿಯ ರವಿ ನಾಡರ್, ಮಹೀಂದ್ರನ್ ನಾಡರ್, ಪಾಂಡಿ ನಾಡರ್ ಬಂಧಿತರು. 1994-95ರಲ್ಲಿ ದಾಖಲಾಗಿದ್ದ ಮೂರು ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಮೂವರು ಆರೋಪಿಗಳು ತಲೆಮರಿಸಿಕೊಂಡಿದ್ದರು. ತಮಿಳುನಾಡಿಗೆ ನಮ್ಮ ತಂಡದವರು ಹೋಗಿ ಅವರನ್ನು ಪತ್ತೆ ಹಚ್ಚಿದ್ದಾರೆ’ ಎಂದು ಕ್ಯಾಂಪ್ ಠಾಣೆ ಇನ್ ಸ್ಪೆಕ್ಟರ್ ಆನಂದ್ ಒನಕುದ್ರೆ 'ಪ್ರಜಾವಾಣಿ'ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.