ADVERTISEMENT

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಕಲಿ ವೈದ್ಯೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2025, 23:16 IST
Last Updated 5 ಸೆಪ್ಟೆಂಬರ್ 2025, 23:16 IST
<div class="paragraphs"><p>–ಪ್ರಾತಿನಿಧಿಕ ಚಿತ್ರ</p></div>

–ಪ್ರಾತಿನಿಧಿಕ ಚಿತ್ರ

   

–ಪ್ರಾತಿನಿಧಿಕ ಚಿತ್ರ

ಬೆಳಗಾವಿ: ತಾನು ವೈದ್ಯ ವಿದ್ಯಾರ್ಥಿನಿ ಎಂದು ಹೇಳಿಕೊಂಡು ಯುವತಿಯೊಬ್ಬರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಕಾರವಾರ ಮೂಲದ ಸನಾ ಶೇಖ್ ಈ ಕೃತ್ಯ ಎಸಗಿದವರು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಈ ಯುವತಿ, ಕುಮಾರಸ್ವಾಮಿ ಬಡಾವಣೆಯಲ್ಲಿ ವಾಸವಾಗಿದ್ದಾರೆ. ವೈದ್ಯರ ವೇಷ ಹಾಕಿಕೊಂಡು ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಬರುತ್ತಿದ್ದರು. ಕಳೆದ ಎರಡು ತಿಂಗಳಿಂದ ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದರು ಎಂದು ಮೂಲಗಳು ಹೇಳಿವೆ.

ಆಸ್ಪತ್ರೆಯ ಇತರ ಸಿಬ್ಬಂದಿ ಸನಾ ಅವರನ್ನು ಪ್ರಶ್ನಿಸಿದಾಗ ತಾನು ವೈದ್ಯಕೀಯ ನಿರ್ದೇಶಕರ ಪರಿಚಯಸ್ಥೆ ಎಂದು ಹೇಳಿ ಸಾಗಹಾಕಿದ್ದರು. ಶುಕ್ರವಾರ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅವರ ಬಣ್ಣ ಬಯಲಾಗಿದೆ. ಜಿಲ್ಲಾಸ್ಪತ್ರೆಯ ವಿಭಾಗವೊಂದರ ಮುಖ್ಯಸ್ಥರೇ ಸನಾ ಅವರಿಗೆ ಈ ಅವಕಾಶ ಮಾಡಿ ಕೊಟ್ಟಿದ್ದಾರೆ ಎಂದೂ ಮೂಲಗಳು ಮಾಹಿತಿ ನೀಡಿವೆ.

ಈ ಬಗ್ಗೆ ಕ್ರಮ ಕೈಗೊಂಡ ಬಿಮ್ಸ್‌ ನಿರ್ದೇಶಕ ಡಾ.ಅಶೋಕ ಶೆಟ್ಟಿ ಮೂವರು ವೈದ್ಯರ ತಂಡ ರಚಿಸಿದ್ದಾರೆ. ಡಾ.ಈರಣ್ಣ ಪಲ್ಲೇದ, ಡಾ.ಎಚ್‌.ಬಿ.ಕೇಶವ್, ಡಾ.ವಸಂತ ಕಬ್ಬೂರ ನೇತೃತ್ವದಲ್ಲಿ ತನಿಖೆಗೆ ನಡೆಸಿ, ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.