ADVERTISEMENT

ಬೆಳಗಾವಿ: ರೈಲು ತಡೆಯಲು ಬಂದ ರೈತರನ್ನು ವಶಕ್ಕೆ ಪಡೆದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:29 IST
Last Updated 18 ಫೆಬ್ರುವರಿ 2021, 8:29 IST

ಬೆಳಗಾವಿ: ತಿದ್ದುಪಡಿ ಮಾಡಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಮತ್ತು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಲು ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ನಗರದ ರೈಲು ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲು ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದ ರೈತರನ್ನು ಪೊಲೀಸರು ಗೇಟ್‌ನಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಯಿತು. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆಯುತ್ತೇವೆ. ಅವಕಾಶ ಮಾಡಿಕೊಡಬೇಕು ಎಂದು ಮುಖಂಡರು ಕೋರಿದರು. ಆದರೆ, ಪೊಲೀಸರು ಅವಕಾಶ ಕೊಡಲಿಲ್ಲ. ಅವರ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ್ದ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ, ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಾದ ಚೂನಪ್ಪ ಪೂಜಾರಿ, ಪ್ರಕಾಶ ನಾಯ್ಕ, ಜಯಶ್ರೀ ಗುರಣ್ಣವರ, ಅಪ್ಪಾಸಾಹೇಬ ದೇಸಾಯಿ ಸೇರಿದಂತೆ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.