ADVERTISEMENT

ಚನ್ನಮ್ಮನ ಕಿತ್ತೂರು: ವಿದ್ಯುತ್ ಕೇಬಲ್ ವೈರ್ ತುಳಿದು ರೈತ ಸಾವು

​ಪ್ರಜಾವಾಣಿ ವಾರ್ತೆ
Published 27 ಮೇ 2024, 15:27 IST
Last Updated 27 ಮೇ 2024, 15:27 IST
ಮಂಜುನಾಥ ದಾಸನಕೊಪ್ಪ
ಮಂಜುನಾಥ ದಾಸನಕೊಪ್ಪ   

ಚನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.