ADVERTISEMENT

ಕಣ್ಣೀರಿಟ್ಟ ರೈತ ಮುಖಂಡ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 14:05 IST
Last Updated 7 ಡಿಸೆಂಬರ್ 2021, 14:05 IST

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲು ಅವಕಾಶ ಸಿಗದಿದ್ದಕ್ಕೆ ಮುಖಂಡ ಹಾಗೂ ನೇಗಿಲಯೋಗಿ ರೈತ ಸೇವಾ ಸಂಘದ ರವಿ ಪಾಟೀಲ ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ರಿಜೆಂಟ ರೆಸಾರ್ಟ್‌ ಬಳಿ ಮಂಗಳವಾರ ನಡೆಯಿತು.

ಮುಖ್ಯಮಂತ್ರಿ ಬರುವ ವಿಷಯ ತಿಳಿದು ಬಂದಿದ್ದ ಅವರು, ‘ಅಕಾಲಿಕ ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಕೂಡಲೇ ಸಮರ್ಪಕವಾಗಿ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿ ಮನವಿ ನೀಡಲು ಯೋಜಿಸಿದ್ದರು. ಆದರೆ, ಪೊಲೀಸರು ಅವರಿಗೆ ಅವಕಾಶ ಕೊಡಲಿಲಿಲ್ಲ. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ರೈತರ ಕಷ್ಟ ಕೇಳದಿದ್ದರೆ ಇವರೆಂತಹ ಮುಖ್ಯಮಂತ್ರಿ’ ಎಂದೂ ಅವರು ಕೇಳಿದರು.

ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಭೆ ಬಳಿಕ, ಮನವಿ ಸಲ್ಲಿಸಲು ರೈತರಿಗೆ ಅನುವು ಮಾಡಿಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.