ADVERTISEMENT

ಚಕ್ಕಾ ಜಾಮ್‌: ಹಿರೇಬಾಗೇವಾಡಿ ಟೋಲ್ ಬಳಿ ರೈತರಿಂದ ರಸ್ತೆ ತಡೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 5:47 IST
Last Updated 6 ಫೆಬ್ರುವರಿ 2021, 5:47 IST
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರು ಹೆದ್ದಾರಿ ತಡೆ ನಡೆಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ/ ಪ್ರಜಾವಾಣಿ ಚಿತ್ರ
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರು ಹೆದ್ದಾರಿ ತಡೆ ನಡೆಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ/ ಪ್ರಜಾವಾಣಿ ಚಿತ್ರ   

ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ ಭಾರತೀಯ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳವರು ಇಂದು ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

‘ರೈತರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಹೋರಾಟನಿರತ ರೈತರ ಮೇಲಿನ ದೌರ್ಜನ್ಯ ಖಂಡಿಸಿ ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಮೇರೆಗೆ ಮಧ್ಯಾಹ್ನ 12ರಿಂದ 2ರವರೆಗೆ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್ ಗೇಟ್ ಸಮೀಪಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಗುವುದು’ ಎಂದು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದರು.

‘ರೈತ ಸಂಘಟನೆ ನೇತೃತ್ವದಲ್ಲಿ ರಸ್ತೆ ತಡೆದು ರೈತರ ಶಕ್ತಿಯನ್ನು ಸರ್ಕಾರಕ್ಕೆ ತೋರಿಸಬೇಕು. ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟದ ಸಹಕಾರದೊಂದಿಗೆ ಚಳವಳಿ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರೈತರು, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಶಕ್ತಿ ಮತ್ತು ಕನ್ನಡ ಪರ ಸಂಘಟನೆಗಳು ಭಾಗವಹಿಸಲಿವೆ’ ಎಂದು ಹೇಳಿದರು.

ADVERTISEMENT

ರೈತ ಸಮುದಾಯಕ್ಕೆ ಮಾರಕವಾಗಿರುವ ಮೂರು ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಎಐಕೆಕೆಎಂಎಸ್ ಮತ್ತು ಎಐಡಿವೈಒ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ರೈತರು ಪ್ರತಿಭಟಿಸಲಿದ್ದಾರೆ ಎಂದುರೈತಮುಖಂಡಬಾಬಾಗೌಡಪಾಟೀಲತಿಳಿಸಿದ್ದಾರೆ.ಮುಂಜಾಗ್ರತಾಕ್ರಮವಾಗಿಹಿರೇಬಾಗೇವಾಡಿಹೆದ್ದಾರಿಸೇರಿದಂತೆವಿವಿಧೆಡೆಪೊಲೀಸರನ್ನುನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.