ADVERTISEMENT

ಒಣಗುತ್ತಿರುವ ತೊಗರಿ: ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 14:18 IST
Last Updated 29 ನವೆಂಬರ್ 2021, 14:18 IST
ಐಗಳಿ ಗ್ರಾಮದಲ್ಲಿ ತೊಗರಿ ಬೆಳೆ ಮಳೆ ಕೊರತೆಯಿಂದ ಒಣಗುತ್ತಿದೆ
ಐಗಳಿ ಗ್ರಾಮದಲ್ಲಿ ತೊಗರಿ ಬೆಳೆ ಮಳೆ ಕೊರತೆಯಿಂದ ಒಣಗುತ್ತಿದೆ   

ಐಗಳಿ: ‘ಅಥಣಿ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಒಣಗುತ್ತಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದು ಸರ್ಕಾರ ಸಮಗ್ರ ಸಮೀಕ್ಷೆ ನಡೆಸಿ ಯೋಗ್ಯ ಪರಿಹಾರ ನೀಡಬೇಕು. ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸಬೇಕು’ ಎಂದು ಮುಖಂ ಕೇದಾರಿಗೌಡ ಬಿರಾದಾರ ಆಗ್ರಹಿಸಿದ್ದಾರೆ.

‘ಮಳೆಯಾಶ್ರಿತ ಪ್ರದೇಶದ ರೈತರ ಬದುಕು ದುಸ್ತರವಾಗಿದೆ. ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಹೀಗಾಗಿ ತೊಗರಿ ಬೆಳೆ ಕೈಗೆ ಬರುತ್ತಿಲ್ಲ. ಸರ್ಕಾರ ರೈತರ ನೆರವಿಗೆ ಬರಬೇಕು’ ಎಂದು ಮುಖಂಡರಾದ ಯಲ್ಲಪ್ಪ ಮಿರ್ಜಿ ಮತ್ತು ಶಂಕರಗೌಡ ಪಾಟೀಲ ಒತ್ತಾಯಿಸಿದ್ದಾರೆ.

‘ತೆಲಸಂಗ ಹೋಬಳಿಯಲ್ಲಿ 8ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬೆಳೆ ಇದೆ. ಶೇ 80ರಷ್ಟು ನೀರಿನ ಕೊರತೆಯಿಂದ ಹಾಳಾಗಿದೆ. ಇದರ ಸಮಗ್ರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ’ ಎಂದು ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.