
ಬೈಲಹೊಂಗಲ: ವಿಶ್ವ ರೈತ ಸಮಾವೇಶದಲ್ಲಿ ಭಾಗವಹಿಸಲು ಮೈಸೂರಿಗೆ ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ರೈತರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಜಾಲಿಕೊಪ್ಪ ಗ್ರಾಮದ ಹತ್ತಿರ ಭಾನುವಾರ ನಡೆದಿದೆ.
ಗರ್ಜೂರ ಗ್ರಾಮದ ರೈತರು ಗಾಯಗೊಂಡವರು. ಗರ್ಜೂರ ಗ್ರಾಮದಿಂದ ಬೈಲಹೊಂಗಲ ಮಾರ್ಗವಾಗಿ ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ತೆರಳುವಾಗ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದರು. ಘಟನಾ ಸ್ಥಳಕ್ಕೆ ಪಿಎಸ್‌ಐ ಗುರುರಾಜ ಕಲಬುರ್ಗಿ, ಎಫ್.ವೈ. ಮಲ್ಲೂರು ಭೇಟಿ ನೀಡಿ ತನಿಖೆ ನಡೆಸಿದರು.
ಅಪಘಾತ, ಪ್ರಾಣಾಪಾಯದಿಂದ ಪಾರು: ಬೈಲವಾಡ ಗ್ರಾಮದ ಹತ್ತಿರ ಆಯತಪ್ಪಿ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ಅದ್ರಷ್ಟವಶಾತ್ ಕಾರಿನಲ್ಲಿದ್ದ ನಾಲ್ಕು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಬರುವಾಗ ಈ ದುರ್ಘಟನೆ ನಡೆದಿದೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆದ ತಕ್ಷಣ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಅನಾಹುತ ತಪ್ಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.