ADVERTISEMENT

ಕಳಪೆ ಬೀಜ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 15:09 IST
Last Updated 8 ಜೂನ್ 2020, 15:09 IST

ಬೆಳಗಾವಿ: ‘ಕೃಷಿ ಇಲಾಖೆ ಮೂಲಕ ಜಿಲ್ಲೆಯ ವಿವಿಧೆಡೆ ವಿತರಿಸಲಾದ ಸೋಯಾಅವರೆ ಬೀಜಗಳು ಕಳಪೆ ಗುಣಮಟ್ಟದವಾಗಿವೆ. ಹೀಗಾಗಿ ಸರ್ಕಾರವು ರೈತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕು ಸೇರಿದಂತೆ ವಿವಿಧೆಡೆ ಬೀಜಗಳು ಸಮರ್ಪಕವಾಗಿ ಮೊಳಕೆ ಬಂದಿಲ್ಲ. ಇದರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಕಳಪೆ ಗುಣಮಟ್ಟದ ಬೀಜ ನೀಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬೈಲಹೊಂಗಲ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಕೆರೆ ಅಭಿವೃದ್ಧಿ ಮಾಡದೆ ವಂಚಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಕೋರಿದರು.

ADVERTISEMENT

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಮರವೆ, ಅನಿಲ ಅನಗೋಳಕರ, ರಮಾಕಾಂತ ಬಾಳೇಕುಂದ್ರಿ, ಹಣಮಂತ ಬಾಳೇಕುಂದ್ರಿ, ಭೂಮೇಶ ಬಿರ್ಜೆ, ನಿತಿನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.