ADVERTISEMENT

ಕಬ್ಬಿನ ಬಿಲ್ ಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 11:03 IST
Last Updated 25 ಸೆಪ್ಟೆಂಬರ್ 2021, 11:03 IST

ಬೆಳಗಾವಿ: ‘ಸಕ್ಕರೆ ಆಯುಕ್ತರ ಕಚೇರಿಯನ್ನು ನಗರಕ್ಕೆ ಸ್ಥಳಾಂತರಿಸಬೇಕು. ಕಬ್ಬು ಪೂರೈಸಿದ ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಬಾಕಿಯನ್ನು ಕೂಡಲೇ ಕೊಡಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಿದ ಅವರು, ‘ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಚೂನಪ್ಪ ಪೂಜಾರಿ ಮಾತನಾಡಿ, ‘ಸಕ್ಕರೆ ಆಯುಕ್ತರ ಕಚೇರಿಯನ್ನು ಇಲ್ಲಿಗೆ ಸ್ಥಳಾಂತರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಈಡೇರಿಲ್ಲ. ಅತಿವೃಷ್ಟಿ ಮತ್ತು ಪ್ರವಾಹದಿಂದ ಮನೆ ಕಳೆದುಕೊಂಡರಿಗೆ ಪರಿಹಾರ ನೀಡುವಲ್ಲೂ ಸರ್ಕಾರ ವಿಫಲವಾಗಿದೆ’ ಎಂದು ದೂರಿದರು.

ADVERTISEMENT

‘ನಮ್ಮ ಬೇಡಿಕೆ ಈಡೇರಿಕೆಗೆ ಸ್ಪಂದನೆ ಸಿಗದಿದ್ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಘೇರಾವ್ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.