ADVERTISEMENT

ಬೆಳಗಾವಿ: ರೈತರಿಂದ ಅರೆಬೆತ್ತಲೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 10:25 IST
Last Updated 19 ನವೆಂಬರ್ 2021, 10:25 IST
ಬೆಳಗಾವಿ ತಾಲ್ಲೂಕಿನ ಹಲಗಾ–ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಯನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರೈತರು ಯಳ್ಳೂರು ರಸ್ತೆ ಸಮೀಪ ಅರೆಬೆತ್ತಲೆಯಾಗಿ, ಭತ್ತದ ಗದ್ದೆಯಲ್ಲಿ ಮಳೆಯಿಂದ ಸಂಗ್ರಹವಾಗಿದ್ದ ನೀರಿನಲ್ಲಿ ನಿಂತು ಶುಕ್ರವಾರ ಪ್ರತಿಭಟನೆ ನಡೆಸಿದರು

ಬೆಳಗಾವಿ: ‘ತಾಲ್ಲೂಕಿನ ಹಲಗಾ–ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಯನ್ನು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ರೈತರು ಯಳ್ಳೂರು ರಸ್ತೆ ಸಮೀಪದಲ್ಲಿ ಅರೆಬೆತ್ತಲೆಯಾಗಿ, ಭತ್ತದ ಗದ್ದೆಯಲ್ಲಿ ಮಳೆಯಿಂದ ಸಂಗ್ರಹವಾಗಿದ್ದ ನೀರಿನಲ್ಲಿ ನಿಂತು ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ರೈತ ಸಂಘಟನೆ ಅಧ್ಯಕ್ಷ ರಾಜು ಮರವೆ ಮಾತನಾಡಿ, ‘ರೈತರ ವಿರೋಧದ ನಡುವೆಯೂ ಕಾನೂನು ಬಾಹಿರವಾಗಿ ಕಾಮಗಾರಿ ಮಾಡುತ್ತಿದ್ದಾರೆ. ಹೈಕೋರ್ಟ್‌ ಆದೇಶವನ್ನು ಗಾಳಿಗೆ ತೂರಿ ನಡೆಸಲಾಗುತ್ತದೆ. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ಇದು ಖಂಡನೀಯ. ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಂತೆ, ಭೂಸ್ವಾಧೀನವನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.

‘ಫಲವತ್ತಾದ ಭೂಮಿ ಇದಾಗಿದೆ. ಇದನ್ನು ರೈತರಿಂದ ಕಸಿದುಕೊಂಡು ರಸ್ತೆ ಮಾಡಲಾಗುತ್ತಿದೆ. ರೈತರ ಹೊಟ್ಟೆಯ ಮೇಲೆ ಹೊಡೆಯಲಾಗುತ್ತಿದೆ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.