ADVERTISEMENT

ಬೆಳಗಾವಿ: ಮುಂದುವರಿದ ಪ್ರತಿಭಟನೆ; ಶಾಸಕ ಶ್ರೀಮಂತ ಪಾಟೀಲ ಚಿತ್ರಕ್ಕೆ ಚಪ್ಪಲಿ ಹಾರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 5:55 IST
Last Updated 19 ನವೆಂಬರ್ 2018, 5:55 IST
   

ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಕೊಡಿಸಬೇಕು ಎಂದು ಆಗ್ರಹಿಸಿ, ರೈತರ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ವಿವಿಧೆಡೆ ರೈತರು ಸೋಮವಾರವೂ ಪ್ರತಿಭಟನೆ ನಡೆಸಿದ್ದಾರೆ.

ಮುಖಂಡ ಅಶೋಕ ಯಮಕನಮರಡಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಅಲ್ಲಿನ ರೈತ ಮುಖಂಡರು ಖಾನಾಪುರ ಬಂದ್ ಕರೆ ನೀಡಿದ್ದಾರೆ. ಅಥಣಿ ತಾಲ್ಲೂಕಿನ ರೈನಾಪುರದಲ್ಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ.

ಅಥಣಿ ತಾಲ್ಲೂಕಿನ ಐನಾಪುರದಲ್ಲಿ ಶಾಸಕ ಶ್ರೀಮಂತ ಪಾಟೀಲ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಭಾನುವಾರ ತಡರಾತ್ರಿ ಶಾಸಕರ ಬೆಂಬಲಿಗರು ಕೆಲ ರೈತರ ಮೆಲೆ ಹಲ್ಲೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಐನಾಪುರದಿಂದ ಕೆಂಪವಾಡ ಕಾರ್ಖಾನೆವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. 12 ಕಿ.ಮೀ.ವರೆಗೆ ಪಾದಯಾತ್ರೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.