ಬೆಳಗಾವಿ: ‘ವಿವಿಧ ರೈತ ಸಂಘಟನೆಯವರು ಭೂದಾಖಲೆಗಳ ಇಲಾಖೆ ಬೆಳಗಾವಿ ಉಪನಿರ್ದೇಶಕರಿಗೆ ತೊಂದರೆ ನೀಡುತ್ತಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗೆ ಯಾವ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.
‘ಭೂದಾಖಲೆಗಳ ಇಲಾಖೆ ಉಪನಿರ್ದೇಶಕರು ನಿಯಮಾನುಸಾರ ಕೆಲಸ ಮಾಡುತ್ತಿದ್ದಾರೆ. ಹಲವು ಪ್ರಕರಣಗಳ ವಿಚಾರಣೆ ನಡೆಸಿ, ರೈತರಿಗೆ ಅನ್ಯಾಯವಾಗದಂತೆ ಕ್ರಮ ವಹಿಸಿದ್ದಾರೆ. ಅಂಥವರ ವಿರುದ್ಧ ದುರುದ್ದೇಶದಿಂದ ಪ್ರತಿಭಟನೆ ನಡೆಸುವುದು ಸರಿಯಲ್ಲ’ ಎಂದರು.
ಮುಖಂಡರಾದ ಚೂನಪ್ಪ ಪೂಜೇರಿ, ಗುರುನಾಥ ಹುಕ್ಕೇರಿ, ಕುಮಾರ ಮರದಿ, ಮಹೇಶ ಸುಬೇದಾರ, ಶಶಿಕಾಂತ ಪಡಸಲಗಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.