ADVERTISEMENT

ಬೆಳಗಾವಿ | ರೈತರ ಹೋರಾಟಕ್ಕೆ ಬೆಂಬಲ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 8:32 IST
Last Updated 5 ನವೆಂಬರ್ 2025, 8:32 IST
   

ಬೆಳಗಾವಿ: ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಎದುರು ಬುಧವಾರ ರಾಷ್ಟ್ರೀಯ ಹೆದ್ದಾರಿ ತಡೆದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಸೌಧದ ಪ್ರವೇಶ ದ್ವಾರದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಹೆದ್ದಾರಿ ಮಧ್ಯೆಯೇ ಪ್ರತಿಭಟನೆ ಆರಂಭಿಸಿದರು. ಟೈಯರ್ ಗೆ ಬೆಂಕಿ ಹಚ್ಚಿ ಎರಡೂ ಬದಿ ಸಂಚಾರ ತಡೆದರು.

ಪೊಲೀಸರು ಮನವೊಲಿಸಿದರೂ ಕಾರ್ಯಕರ್ತರು ಪಟ್ಟು ಸಡಿಲಿಸಲಿಲ್ಲ. ಹಾಗಾಗಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ADVERTISEMENT

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.