ADVERTISEMENT

ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಜನ್ಮದಿನ: ನ.11ರಂದು ಅಭಿನಂದನಾ ಸಮಾರಂಭ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 6:02 IST
Last Updated 7 ನವೆಂಬರ್ 2022, 6:02 IST
ಪ್ರಭಾಕರ ಕೋರೆ
ಪ್ರಭಾಕರ ಕೋರೆ   

ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಜನ್ಮದಿನದ ಅಂಗವಾಗಿ ಇಲ್ಲಿನ ಶಿವಬಸವ ನಗರದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ‌ನಲ್ಲಿ ನ.11ರಂದು ಬೆಳಿಗ್ಗೆ 10.30ಕ್ಕೆ ಅಮೃತ ಮಹೋತ್ಸವ ಅಭಿನಂದನಾ ಸಮಾರಂಭ ಹಾಗೂಮಠಾಧೀಶರ ಚಿಂತನಾ ಸಮಾವೇಶ ಆಯೋಜಿಸಲಾಗಿದೆ.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ನಿಡಸೋಸಿಯ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಈ ಬಗ್ಗೆ ಮಾಹಿತಿ ನೀಡಿದರು.

ಪ್ರಭಾಕರ‌ ಕೋರೆ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದ್ದಾರೆ. ಕೆಎಲ್ಇ ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಬೆಳೆಸಿದ್ದಾರೆ. ಅವರನ್ನು ಅಭಿನಂದಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.ಮೊಸೂರಿನ ಸುತ್ತೂರು ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆಯ ತರಳಬಾಳು ಮಹಾಸಂಸ್ಥಾನ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.ನಾಡಿನ 250ಕ್ಕೂ ಮಠಾಧೀಶರು ಭಾಗವಹಿಸುವರು ಎಂದರು.

ADVERTISEMENT

ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ‌ ಕವಟಗಿಮಠ ಮಾತನಾಡಿ, ಉತ್ತರ ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಮುಂದೆ ಬರಲು ಮಠಗಳು ಹಾಗೂ ಶಿಕ್ಷಣ ಸಂಸ್ಥೆಗಳ‌ ಕೊಡುಗೆ ಅಪಾರ.ಇವೆರಡೂ ಸಮಾಜಕ್ಕೆ ನೀಡಿದ‌ ಕೊಡುಗೆ ಸ್ಮರಿಸುವ ಜೊತೆಗೆ, ಮುಂಬರುವ ದಿನಗಳಲ್ಲಿ ಆಗಬೇಕಿರುವ ಕೆಲಸಗಳ‌ ಕುರಿತಾಗಿಯೂ ಚರ್ಚಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರಾಜಕೀಯ ಉದ್ದೇಶವೇನಿಲ್ಲ ಎಂದು ಹೇಳಿದರು.

ಬೆಳಗಾವಿಯ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಶೇಗುಣಸಿಯ ಮಹಾಂತ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.