ADVERTISEMENT

ಆಶಾ ಕಾರ್ಯಕರ್ತೆಯರ ಸೇವೆಗೆ ಬೆಲೆ ಕಟ್ಟಲಾಗದು

​ಪ್ರಜಾವಾಣಿ ವಾರ್ತೆ
Published 5 ಮೇ 2020, 14:33 IST
Last Updated 5 ಮೇ 2020, 14:33 IST
ಅಥಣಿ ತಾಲ್ಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕೊರೊನಾ ಯೋಧರನ್ನು ಮಂಗಳವಾರ ಸತ್ಕರಿಸಲಾಯಿತು
ಅಥಣಿ ತಾಲ್ಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕೊರೊನಾ ಯೋಧರನ್ನು ಮಂಗಳವಾರ ಸತ್ಕರಿಸಲಾಯಿತು   

ಅಥಣಿ: ‘ಕೊರೊನಾ ಸೋಂಕು ಭೀತಿಯಲ್ಲೂ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಗೆ ಬೆಲೆ ಕಟ್ಟಲಾಗದು. ಅವರ ಕಾರ್ಯ ಶ್ಲಾಘನೀಯವಾದುದು’ ಎಂದು ಐಗಳಿ ಪಿಎಸ್ಐ ಕೆ.ಎಸ್. ಕೊಚೇರಿ ಹೇಳಿದರು.

ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಪತ್ರಕರ್ತರು, ಹೆಸ್ಕಾಂ, ಪೋಲಿಸ್ ಹಾಗೂ ಪಂಚಾಯಿತಿ ಸಿಬ್ಬಂದಿಗೆಮಂಗಳವಾರ ಕೋಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ಸತ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೊರೊನಾ ಯೋಧರಿಗೆ ಯಾರಾದರೂ ಬೆದರಿಕೆ ಹಾಕಿದರೆ, ನಿಂದಿಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಆಶಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ಹೆದರಬಾರದು’ ಎಂದರು.

ADVERTISEMENT

‘ಆಶಾ ಕಾರ್ಯಕರ್ತೆಯರಿಗೆ ಸರ್ಕಾರವು ಸೇವಾ ಭದ್ರತೆ ಹಾಗೂ ಕನಿಷ್ಠ ವೇತನ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋನವ್ವ ಉಮರಾಣಿ ಒತ್ತಾಯಿಸಿದರು.

ಪಿಡಿಒ ಈರಪ್ಪ ತಮದಡ್ಡಿ ಮಾತನಾಡಿದರು. ಪಂಚಾಯಿತಿ ಉಪಾಧ್ಯಕ್ಷ ಶ್ರೀಕಾಂತ ಆಲಗೂರ, ತಾಲ್ಲೂಕು ಪಂಚಾಯಿತಿ ಸದಸ್ಯ ಸದಾಶಿವ ಹರಪಾಳೆ, ರವಿ ಮುದಗೌಡರ, ದುಂಡಪ್ಪ ಬಾಡಗಿ, ವಸಂತ ಝರೆ, ದುಂಡಪ್ಪ ಡಂಬಳಿ, ಮಲಿಕಸಾಬ ಪಡಸಲಗಿ, ಹಣಮಂತ ಕನ್ನಾಳ, ಚಿದಾನಂದ ತಳಕೇರಿ, ಶರಣಪ್ಪ ಮುಧೋಳ, ರಮೇಶ ಉಮರಾಣಿ, ಸಂಗಪ್ಪ ಡಂಬಳಿ, ಕೇಧಾರಿ ವಳಸಂಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.