ADVERTISEMENT

‘ಸುಶಿಕ್ಷಿತರಿಂದ ದೇಶ ಸುಭದ್ರ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 14:23 IST
Last Updated 3 ಜುಲೈ 2022, 14:23 IST
ಬೆಳಗಾವಿಯ ಆರ್‌ಎಲ್‌ಎಸ್‌ ಕಾಲೇಜಿನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮಹಾಂತೇಶ ಕವಟಗಿಮಠ ಮಾತನಾಡಿದರು
ಬೆಳಗಾವಿಯ ಆರ್‌ಎಲ್‌ಎಸ್‌ ಕಾಲೇಜಿನಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮಹಾಂತೇಶ ಕವಟಗಿಮಠ ಮಾತನಾಡಿದರು   

ಬೆಳಗಾವಿ: ‘ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ದ್ವಿತೀಯ ವರ್ಷ ಸುವರ್ಣ ವರ್ಷ ಎಂದೇ ಹೇಳಬೇಕು. ಇದರ ಫಲಿತಾಂಶದಿಂದ ವಿವಿಧ ಕೋರ್ಸುಗಳಿಗೆ ಹೋಗುವ ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಅಧ್ಯಯನ ಮಾಡಬೇಕು’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ರಾಜಾ ಲಖಮಗೌಡ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಪ್ರಸಕ್ತ ಸಾಲಿನವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.

‘ಮಾನವ ಸಂಪನ್ಮೂಲಕ್ಕೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಸುಶಿಕ್ಷಿತ ಭಾರತ ಸಿದ್ಧಗೊಳ್ಳುತ್ತದೆ. 21ನೇ ಶತಮಾನವು ಶಿಕ್ಷಣದ ಶತಮಾನ. ವಿದ್ಯಾರ್ಥಿಗಳು ಕ್ಷಮತೆ ಹಾಗೂ ಕೌಶಲ ಬೆಳೆಸಿಕೊಂಡರೆ ಮಾತ್ರ ಸ್ಪರ್ಧೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದರು.

ADVERTISEMENT

ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಎಲ್.ವಿ. ದೇಸಾಯಿ ಮಾತನಾಡಿ, ‘ಮಾನವನಿಗೆ ದೇವರು ಕೊಟ್ಟ ಅತಿ ದೊಡ್ಡ ಕೊಡುಗೆ ಬುದ್ಧಿಶಕ್ತಿ. ಬುದ್ಧಿಶಕ್ತಿಯನ್ನು ಜಾಣತನದಿಂದ ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕೆಎಲ್‌ಇ ಸಂಸ್ಥೆಯ ಆಜೀವ ಸದಸ್ಯ ಎಸ್.ಜಿ. ನಂಜಪ್ಪನವರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಜೆ.ಎಸ್. ಕವಳೇಕರ, ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಸಿ. ಕಾಮಗೋಳ, ಉಪ-ಪ್ರಾಚಾರ್ಯ ಡಾ.ಎಸ್.ಎ. ಜವಳಿ ಇದ್ದರು.

ಪ್ರಾಚಾರ್ಯ ವಿ.ಸಿ. ಕಾಮಗೋಳ ಮಾತನಾಡಿದರು. ಪಿ.ಬಿ. ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.