ADVERTISEMENT

ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಮುಂದಾಗಿ: ಶಾಸಕ ಮಹೇಶ ಕುಮಠಳ್ಳಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2018, 15:35 IST
Last Updated 15 ಅಕ್ಟೋಬರ್ 2018, 15:35 IST
ಅಥಣಿಯಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಅಪರಾಧ ನಿಯಂತ್ರಣ ಸಮಿತಿಯನ್ನು ಸೋಮವಾರ ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ ಉದ್ಘಾಟಿಸಿದರು
ಅಥಣಿಯಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಅಪರಾಧ ನಿಯಂತ್ರಣ ಸಮಿತಿಯನ್ನು ಸೋಮವಾರ ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ ಉದ್ಘಾಟಿಸಿದರು   

ಅಥಣಿ: ಭ್ರಷ್ಟಾಚಾರ, ಅಪರಾಧ ಹಾಗೂ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ಪ್ರತಿಯೊಬ್ಬರೂ ಹೋರಾಡಬೇಕು ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.

ಇಲ್ಲಿ ಸೋಮವಾರ ನಡೆದ ಭ್ರಷ್ಟಾಚಾರ ವಿರೋಧಿ ಮತ್ತು ಅಪರಾಧ ನಿಯಂತ್ರಣ ಸಮಿತಿಯ ಉದ್ಘಾಟನಾ ಸಮಾರಂಭ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿ ಹಾಸುಹೊಕ್ಕಾಗಿರುವ ಭ್ರಷ್ಟಾಚಾರ ಮತ್ತು ಶೋಷಣೆಗಳನ್ನು ನಿರ್ಮೂಲನೆ ಮಾಡಲು ಸಂಘಟನಾತ್ಮಕ ಹೋರಾಟ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದು ಖಂಡನೀಯ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುವಂತಹ ವಾತಾವರಣ ನಿರ್ಮಾಣವಾಗಬೇಕು’ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಶಹಜಹಾನ್‌ ಡೊಂಗರಗಾಂವ ಮಾತನಾಡಿ, ‘ಅಂಬೇಡ್ಕರ್‌ ಹೇಳಿದಂತೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟದಿಂದ ಮಾತ್ರ ನಾವು ಹಕ್ಕುಗಳನ್ನು ಪಡೆದುಕೊಳ್ಳಬಹುದು. ಅನ್ಯಾಯ ಮೆಟ್ಟಿ ನಿಲ್ಲಬಹುದು. ಇದಕ್ಕಾಗಿ ಜಾಗೃತರಾಗಬೇಕಾದರೆ ಶಿಕ್ಷಣ ಒಂದೇ ಮಾರ್ಗವಾಗಿದೆ’ ಎಂದು ತಿಳಿಸಿದರು.

ಭ್ರಷ್ಟಾಚಾರ ವಿರೋಧಿ ಮತ್ತು ಅಪರಾಧ ನಿಯಂತ್ರಣ ಸಮಿತಿ ರಾಜ್ಯ ಸಂಯೋಜಕ ಯಾಸಿನ್ ಝಾರೆ, ಜಿಲ್ಲಾ ಘಟಕದ ಅಧ್ಯಕ್ಷ ಮುರುಘೇಂದ್ರ ಕಾಳೆ ಮಾತನಾಡಿದರು.

ಶೆಟ್ಟರಮಠದ ಮರುಳಸಿದ್ಧ ಸ್ವಾಮೀಜಿ ಉದ್ಘಾಟಿಸಿದರು. ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಯಾದವಾಡ, ಮುಖಂಡರಾದ ಅಸ್ಲಮ್ ನಾಲಬಂದ, ದಿಲೀಪ ಲೋಣಾರೆ, ಸುಶಾಂತ ಪಟ್ಟಣ, ರಾಜು ಜಮಖಂಡಿಕರ, ಅಯಾಜ ಮಾಸ್ಟರ್, ಶಶಿಕಾಂತ ಸಾಳವಿ, ಗೌತಮ ಪರಾಂಜಪೆ, ಮಹಾಂತೇಶ ಬಾಡಗಿ, ಫಾರೂಕ್‌ ದ್ರಾಕ್ಷಿ, ರಾಜು ಕಾವೇರಿ, ಶಕೀಲ್‌ ನಾಲಬಂದ, ಇಮ್ರಾನ್‌ ದ್ರಾಕ್ಷಿ, ರಾಜು ಮಾಳಿ, ಇರ್ಫಾನ್ ಕೊರಬು, ಸತೀಶ ಪವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.