ADVERTISEMENT

₹19 ಕೋಟಿ ವೆಚ್ಚದಲ್ಲಿ ಕೆರೆ ಭರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 7:05 IST
Last Updated 29 ಆಗಸ್ಟ್ 2024, 7:05 IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಯ ಬಾಗಿನ ಅರ್ಪಣಾ ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಬುಧವಾರ ಪೂರ್ಣಕುಂಭ ಮೆರವಣಿಗೆ ನಡೆಸಿದರು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಯ ಬಾಗಿನ ಅರ್ಪಣಾ ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಬುಧವಾರ ಪೂರ್ಣಕುಂಭ ಮೆರವಣಿಗೆ ನಡೆಸಿದರು   

ಹಿರೇಬಾಗೇವಾಡಿ: ‘ಈ ವರ್ಷ ಉತ್ತಮ ಮಳೆಯಾದ ಕಾರಣ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ₹19 ಕೋಟಿ ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಸಿದ್ಧನಬಾವಿ ಕೆರೆಗೆ ಬುಧವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಬಾವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದೆ. ಇಂದು ಗಂಗಾಮಾತೆಗೆ ಬಾಗಿನ ಅರ್ಪಿಸಿರುವುದು ಖುಷಿ ತಂದಿದೆ’ ಎಂದರು.

‘ಇದರಿಂದ ಬೋರವೆಲ್‌ಗಳ ಅಂತರ್ಜಲ ವೃದ್ಧಿಯಾಗಲಿದೆ. ಜನರಿಗೆ, ಜಾನುವಾರುಗಳಿಗೆ, ಸುತ್ತಮುತ್ತಲಿನ ರೈತರಿಗೆ ಸಹಾಯವಾಗಲಿದೆ. ಈ ಮೊದಲು ಕೆರೆ ತುಂಬಿಸುವ ಭರವಸೆ ನೀಡಿದ್ದೆ, ಇದೀಗ ನುಡಿದಂತೆ ಕೆರೆ ತುಂಬಿಸುವ ಕಾರ್ಯ ಮಾಡಲಾಗಿದೆ’ ಎಂದರು.

ADVERTISEMENT

‘ಹಿರೇಬಾಗೇವಾಡಿ ಗ್ರಾಮದ 80 ಎಕರೆ ಜಮೀನು ವಿಶ್ವವಿದ್ಯಾಲಯಕ್ಕೆ ಹೋಗಿದೆ. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಹತ್ತಿರ ಮಾತನಾಡಿ ಮಲ್ಲಯ್ಯನ ಗುಡ್ಡದಲ್ಲಿ ಗ್ರಾಮಸ್ಥರಿಗಾಗಿ 10 ಎಕರೆ ವಾಪಸ್ ಕೊಡಿಸಲಾಗುವುದು. ಜೊತೆಗೆ ಆ ಜಮೀನಿನಲ್ಲಿ ಮಲ್ಲಯ್ಯನ ದೇವಸ್ಥಾನ ನಿರ್ಮಿಸಲಾಗುವುದು’ ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಜಾಲಿಕರೆಮ್ಮ ದೇವಿ ಆರಾಧಕ ಉಳವಪ್ಪ ಅಜ್ಜ, ಗಂಗಯ್ಯ ಸ್ವಾಮಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷೆ ಪುಷ್ಪ ನಾಯ್ಕರ್, ಸುರೇಶ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ಅನಿಲ ಪಾಟೀಲ, ಶ್ರೀಕಾಂತ ಮಾಧು ಭರಮಣ್ಣವರ, ಅಡಿವೇಶ ಇಟಗಿ, ಪಡಿಗೌಡ ಪಾಟೀಲ, ಶಿವು ಹಳೇಮನಿ, ಪ್ರಕಾಶ ಜಪ್ತಿ, ಖತಾಲ್ ಗೋವೆ, ಮಹಾಂತೇಶ ಹಂಚಿನಮನಿ, ನಿಂಗಪ್ಪ ತಳವಾರ, ಆನಂದ ಪಾಟೀಲ, ಅಡಿವೆಪ್ಪ ತೋಟಗಿ, ಆನಂದ ಪಾಟೀಲ, ರಘು ಪಾಟೀಲ ಗ್ರಾಮದ ನೂರಾರು ಮಹಿಳೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.