ADVERTISEMENT

18 ಮಹಿಳಾ ಸಂಘಗಳಿಗೆ ಪ್ರೋತ್ಸಾಹಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 6:05 IST
Last Updated 15 ಅಕ್ಟೋಬರ್ 2021, 6:05 IST
ಬೆಳಗಾವಿ ತಾಲ್ಲೂಕಿನ ಸಾಂಬ್ರಾದಲ್ಲಿ ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು
ಬೆಳಗಾವಿ ತಾಲ್ಲೂಕಿನ ಸಾಂಬ್ರಾದಲ್ಲಿ ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು   

ಬೆಳಗಾವಿ: ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು.

ತಾಲ್ಲೂಕಿನ ಸಾಂಬ್ರಾ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ ಅಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700 ಹೆಚ್ಚು ಸ್ವಸಹಾಯ ಸಂಘಗಳ ಸಂಘಗಳಿಗೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಸಾಮಾನ್ಯ ವರ್ಗದವರಿಗೆ ₹ 75 ಸಾವಿರ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ₹1.25 ಲಕ್ಷ ನಿಗದಿಪಡಿಸಲಾಗಿದೆ.

‘ಮಹಿಳೆಯರಿಗೆ ಉತ್ತೇಜನ ನೀಡುವ ಸಲುವಾಗಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಬೇಕು. ಮಹಿಳಾ ಸಬಲೀಕರಣಕ್ಕೆ ಕ್ರಮ ತೆಗೆದುಕೊಳ್ಳಬೇಕು. ಹೈನುಗಾರಿಕೆಗೆ ಪ್ರೋತ್ಸಾಹ ನೀಡಬೇಕು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಚಿವರಲ್ಲಿ ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.