ಬೆಳಗಾವಿಯಲ್ಲಿ ರಾಜ್ಯ ನೇಕಾರ ಸೇವಾಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು
ಪ್ರಜಾವಾಣಿ ಚಿತ್ರ
ಬೆಳಗಾವಿ: ‘ಕರ್ನಾಟಕ ಕೈಮಗ್ಗ ಮತ್ತು ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ಸಾಲ ಬಾಧೆಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 51 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ವಿವಿಧೆಡೆ ನೇಕಾರರು ಪಡೆದಿರುವ ಸಾಲಮನ್ನಾ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಒದಗಿಸಬೇಕು. 2023ರ ಏಪ್ರಿಲ್ 1ರಿಂದ ವಿದ್ಯುತ್ ಶುಲ್ಕ ಹೆಚ್ಚಿಸಿದ್ದರಿಂದ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ. ಹೆಚ್ಚುವರಿ ಶುಲ್ಕವನ್ನೂ ಸರ್ಕಾರವೇ ಭರಿಸಬೇಕು’ ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ, ಅರ್ಜುನ ಕುಂಬಾರ, ಬಬನ್ ಮಾಳಿ, ಅಕ್ಷಯ ಕುಂಬಾರ, ಚಂದ್ರಕಾಂತ ಹುಕ್ಕೇರಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.