ADVERTISEMENT

ದೇವಸ್ಥಾನಗಳಿಗೆ ಆರ್ಥಿಕ ನೆರವು ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 6:01 IST
Last Updated 17 ಆಗಸ್ಟ್ 2021, 6:01 IST
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಬೀರದೇವರ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇಗುಲಗಳ ಸಮಿತಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಧನಸಹಾಯದ ಚೆಕ್‌ಗಳನ್ನು ಸೋಮವಾರ ವಿತರಿಸಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಬೀರದೇವರ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇಗುಲಗಳ ಸಮಿತಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಧನಸಹಾಯದ ಚೆಕ್‌ಗಳನ್ನು ಸೋಮವಾರ ವಿತರಿಸಿದರು   

ಬೆಳಗಾವಿ: ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಬೀರದೇವರ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇಗುಲಗಳ ಸಮಿತಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಧನಸಹಾಯದ ಚೆಕ್‌ಗಳನ್ನು ಸೋಮವಾರ ವಿತರಿಸಿದರು.

‘ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನೂ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ನೆರವು ನೀಡುತ್ತಿದ್ದೇನೆ. ಬೀರದೇವರ ದೇವಸ್ಥಾನಕ್ಕೆ ₹ 6.50 ಲಕ್ಷ ಪೈಕಿ ಮೊದಲ ಕಂತಾಗಿ ₹ 3.50 ಲಕ್ಷ ಹಾಗೂ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ₹ 3.50 ಲಕ್ಷ ಪೈಕಿ ಮೊದಲ ಕಂತಾಗಿ ₹ 1.95 ಲಕ್ಷ ಚೆಕ್‌ಗಳನ್ನು ನೀಡಲಾಗಿದೆ’ ಎಂದರು.

ಗ್ರಾಮದ ಹಿರಿಯರು, ಮುಖಂಡ ನಾಗೇಶ ದೇಸಾಯಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಆಯಾ ದೇವಸ್ಥಾನಗಳ ಸಮಿತಿಯವರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.